50,700 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ

ಭೋಪಾಲ್: ಪ್ರಧಾನ ಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿ 50,700 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿನಾ ರಿಫೈನರಿಯಲ್ಲಿ ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್‌ನ ಶಂಕುಸ್ಥಾಪನೆ ಮತ್ತು ರಾಜ್ಯಾದ್ಯಂತ ಹತ್ತು ಹೊಸ ಕೈಗಾರಿಕಾ ಯೋಜನೆಗಳು ಸೇರಿದಂತೆ 50,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಯೋಜನೆಗಳ ಶಂಕುಸ್ಥಾಪನೆ ಹಿನ್ನಲೆಯಲ್ಲಿಇಂದು ಮಧ್ಯಪ್ರದೇಶದ ಬಿನಾಗೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಪ್ರಮುಖ ಉತ್ತೇಜನ ನೀಡುವ ಹಂತವಾಗಿ, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್)ನ ಬಿನಾ ರಿಫೈನರಿಯಲ್ಲಿ ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್‌ಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಅತ್ಯಾಧುನಿಕ ಸಂಸ್ಕರಣಾಗಾರವನ್ನು ಸುಮಾರು 49,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದು ಸುಮಾರು 1200 ಕೆಟಿಪಿಎ (ವರ್ಷಕ್ಕೆ ಕಿಲೋ-ಟನ್) ಎಥಿಲೀನ್ ಮತ್ತು ಪ್ರೊಪಿಲೀನ್ ಉತ್ಪಾದಿಸುತ್ತದೆ. ಇದು ಜವಳಿ, ಪ್ಯಾಕೇಜಿಂಗ್, ಫಾರ್ಮಾ ಮುಂತಾದ ವಿವಿಧ ಕ್ಷೇತ್ರಗಳಿಗೆ ಪ್ರಮುಖ ಅಂಶವಾಗಿದೆ. ಇದು ದೇಶದ ಆಮದು ಅವಲಂಬನೆ ಕಡಿಮೆ ಮಾಡುತ್ತದೆ. ಜತೆಗೆ, ಪ್ರಧಾನ ಮಂತ್ರಿ ಅವರ ‘ಆತ್ಮನಿರ್ಭರ ಭಾರತ’ದ ದೂರದೃಷ್ಟಿ ಈಡೇರಿಸುವತ್ತ ಒಂದು ದಿಟ್ಟ ಹೆಜ್ಜೆಯಾಗಿದೆ. ಈ ಮೆಗಾ ಯೋಜನೆಯು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಪೆಟ್ರೋಲಿಯಂ ವಲಯದಲ್ಲಿ ಕೆಳಮಟ್ಟದ ಕೈಗಾರಿಕೆಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.

ಗಮನಾರ್ಹ ಅಂಶವೆಂದರೆ, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯು ಈ ವರ್ಷದ ಕೊನೆಯಲ್ಲಿ ನಡೆಯಲಿದೆ.

Comments (0)
Add Comment