’83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು’ – ಬೇಡಿಕೆ ಇಟ್ಟ ತಮಿಳುನಾಡು

ನವದೆಹಲಿ: ”ನಮಗೆ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ಕಾವೇರು ನೀರು ಹರಿಸುವಂತೆ ನೀಡಿದ ಆದೇಶ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಮತ್ತು ತಮಿಳುನಾಡು ಪ್ರತಿನಿಧಿಗಳ ಜೊತೆ ಕಾವೇರಿ ನೀರು ನಿಯಂತ್ರಣ ಸಮಿತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದೆ.

ಇನ್ನು ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಾಡಿದೆ.

Comments (0)
Add Comment