ರಾಜ್ಯ ಮಟ್ಟದ ಕೃಷಿ ಪಂಡಿತ, ಜಿಲ್ಲಾ, ತಾಲ್ಲೂಕು, ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ದಾವಣಗೆರೆ; ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಹಾಗೂ   ಜಿಲ್ಲಾ, ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಗುಂಪು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ದಿ, ನೀರಿನ ಸಾಮರ್ಥ ಬಳಕೆ, ಇನ್ನಿತರೆ ಯಾವುದಾದರು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರಬೇಕು.

ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇμÉ್ಮ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಷ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಅರ್ಹ ರೈತರು ಜುಲೈ 24 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರಾದ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.

Applications are invited for State Level Krishi PanditDistrictLevel Best Farmer AwardTaluk
Comments (0)
Add Comment