BREAKING : ಆಕ್ರೋಶದ ಬೆನ್ನಲ್ಲೆ ಉಲ್ಟಾ ಹೊಡೆದ ಸರ್ಕಾರ – ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್ ಪಡೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಬಂಧ ವಾಪಸ್ ಪಡೆದುಕೊಂಡಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಲಾಗಿತ್ತು. ಈ ಆಕ್ಷೇಪ ವ್ಯಕ್ತವಾದ ನಂತರ ಧಾರ್ಮಿಕ ಹಬ್ಬಗಳ ಆಚರಣೆಗೆ ಸಂಬಂಧಿಸಿದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸದಂತೆ, 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಿಸುವಂತೆ ಸುತ್ತೋಲೆ ಹೊರಡಿಸಲಾಗಿತ್ತು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿತ್ತು.

Comments (0)
Add Comment