BREAKING NEWS : ಗಾಜಾ ಆಸ್ಪತ್ರೆ ಮೇಲೆ ದಾಳಿ – 500 ಜನರ ಸಾವು

ಗಾಜಾ: ಗಾಜಾ ನಗರದ ಆಸ್ಪತ್ರೆಯೊಂದರ ಮೇಲೆ ಮಂಗಳವಾರ ತಡರಾತ್ರಿ ಇಸ್ರೇಲ್ ವಾಯುಸೇನೆ ದಾಳಿ ಮಾಡಿದೆ. ಪರಿಣಾಮ 500ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ‘ಅಹ್ಲಿ ಅರಬ್ ಎಂಬ ಆಸ್ಪತ್ರೆ ಮೇಲೆ ದಾಳಿ ನಡೆದಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ. ದಾಳಿ ಪರಿಣಾಮ 500 ಜನ ಮೃತಪಟ್ಟು ನೂರಾರು ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದಾರೆ. ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಹಮಾಸ್ ಸರ್ಕಾರ ಈ ದಾಳಿಯನ್ನು ‘ಯುದ್ಧ ಅಪರಾಧ’ ಎಂದು ಹೇಳಿದೆ.

Comments (0)
Add Comment