Breaking News: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದರೆ ಬೀಳುತ್ತೆ 10 ವರ್ಷ ಜೈಲು, 1 ಕೋಟಿ ರೂ ದಂಡ.!

ನವದೆಹಲಿ: ಲೋಕಸಭೆಯು ಮಂಗಳವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024ಅನ್ನು ಅಂಗೀಕರಿಸಿದೆ. ಹೌದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅವ್ಯವಹಾರಗಳು ಮತ್ತು ಅಕ್ರಮಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಸೋಮವಾರ ಮಂಡಿಸಿತ್ತು. ಇದಕ್ಕೆ ಲೋಕಸಭೆಯು ಅಂಗೀಕಾರ ನೀಡಿದೆ. ಈ ಮೂಲಕ UPSC, SSC, NEET ಮತ್ತು JEE ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ ಮತ್ತು ಸಂಘಟಿತ ವಂಚನೆಗೆ ಸಂಬಂಧಿಸಿದ ಪ್ರಕರಣಗಳನ್ನು ತಡೆಯುವ ಉದ್ದೇಶವನ್ನು ಈ ಮಸೂದೆ ಹೊಂದಿದೆ. ಇಂತಹ ಕೆಲವು ಪ್ರಕರಣಗಳಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿವರೆಗೆ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ಇದು ಪ್ರಸ್ತಾಪಿಸುತ್ತದೆ.

Comments (0)
Add Comment