ಮುಂದಿನ 3 ದಿನಗಳ ಕಾಲ ರಾಜ್ಯದ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ.!

 

ಬೆಂಗಳೂರು: ಮುಂದಿನ 3 ದಿನಗಳ ಕಾಲ ರಾಜ್ಯದ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಗಳೂರು, ಕ್ಯಾಸಲ್​ರಾಕ್, ದೊಡ್ಡಬಳ್ಳಾಪುರ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ದೇವನಹಳ್ಳಿ, ಯಲಹಂಕ, ಶಿರಾಲಿ, ಗೇರುಸೊಪ್ಪ, ಕಾರವಾರ, ಕದ್ರಾ, ಜೋಯ್ಡಾ, ಮಂಕಿ, ಬೇಲಿಕೇರಿ, ಗೋಕರ್ಣ, ಕೊಲ್ಲೂರು, ಕೋಟ, ಉಪ್ಪಿನಂಗಡಿ, ಕಾರ್ಕಳ, ಉಡುಪಿ, ಭಾಗಮಂಡಲ, ಕುಣಿಗಲ್, ತಾಳಗುಪ್ಪ, ಹೊಸಕೋಟೆ, ರಾಮನಗರ, ಹಿರಿಯೂರಿನಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Heavy rain in more than 7 districts of the state for the next 3 days.
Comments (0)
Add Comment