LPG ಗ್ರಾಹಕರಿಗೆ ಶಾಕ್ – ಗ್ಯಾಸ್ ಬೆಲೆ ಏರಿಕೆ, ಇಂದಿನಿಂದ ಹೊಸ ಬೆಲೆ ಅನ್ವಯ

ನವದೆಹಲಿ: ಎಲ್‌ಪಿಜಿ ಗ್ರಾಹಕರಿಗೆ ಫೆಬ್ರವರಿ 1ರಂದು ಮುಂಜಾನೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಕೇಂದ್ರ ಬಜೆಟ್‌ನ ದಿನದಂದೇ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ ಮಾಡಿವೆ. ಚಳಿಗಾಲದಲ್ಲಿ ಹೆಚ್ಚಿದ ಬೇಡಿಕೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಣಾಮ ಬೀರುವ ಬೆಲೆಯಿಂದಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 14 ರೂ.ಗಳಷ್ಟು ಹೆಚ್ಚಿಸಲಾಗಿದೆ. ಆದರೆ, 19ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಈ ಹೆಚ್ಚಳ ಮಾಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಅನಿಲ ಸಿಲಿಂಡರ್‌ಗಳ ಹೊಸ ಬೆಲೆ ಇಂದಿನಿಂದ ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1.50 ರೂಪಾಯಿ ಏರಿಕೆ ಮಾಡಲಾಗಿತ್ತು. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತದಲ್ಲಿ 1869 ರೂಪಾಯಿನಿಂದ 1887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1708 ರೂಪಾಯಿಯಿಂದ 1723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1924.70 ರೂಪಾಯಿಯಿಂದ 1937 ರೂಗೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.

Comments (0)
Add Comment