SC, ST ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ : ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಅಧೀನದ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಸಂಬಂಧ ಮಾಧ್ಯಮ ವರದಿ ಆಧರಿಸಿ ಹೈಕೋರ್ಟ್ ಪಿಐಎಲ್ ದಾಖಲಿಸಿಕೊಂಡಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಕೈಗೊಂಡ‌ ಕ್ರಮಗಳ ವರದಿ ಸಲ್ಲಿಸಲು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಸೂಚಿಸಿದೆ.

ಸಿಬ್ಬಂದಿ ಕೊರತೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಧಕ್ಕೆಯಾಗಲಿದೆ. ಖಾಲಿ ಇರುವ ಹುದ್ದೆಗ‌ಳ‌ ನೇಮಕಕ್ಕೆ ಕ್ರಮವಾಗಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ 2 ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್​ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಸೂಚಿಸಿದೆ.

Comments (0)
Add Comment