ಯಾವಾಗಲೂ ಒಂದಲ್ಲ ಒಂದು ವಿವಾದದ ಮೂಲಕ ಸದಾ ಸುದ್ದಿಯಲ್ಲಿರುವ ಅನಂತ್ ಕುಮಾರ್ ಹೆಗ್ಡೆ ಅವರು ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಬಾರಿ ಅವರು ತಮ್ಮ ವಿವಾದಕ್ಕೆ ಬಳಸಿಕೊಂಡಿರುವುದು  ನಮ್ಮ ಭಾರತದ ಪಿತಾಮಹ ಮಹಾತ್ಮ ಗಾಂಧಿಯವರನ್ನು. ಮಹಾತ್ಮ ಗಾಂಧಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವ ವಿಚಾರ ಎಲ್ಲರಿಗೂ ತಿಳಿದಿರುವುದೇ ಸರಿ. ಅನಂತ್ ಕುಮಾರ್ ಹೆಗ್ಡೆ ಅವರು ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಮಹಾತ್ಮ ಗಾಂಧಿಯವರ ಬಗ್ಗೆ ಬಹಳ ಹಗುರವಾದ ಹೇಳಿಕೆಯನ್ನು ನೀಡಿದ್ದಾರೆ.  “ಗಾಂಧಿ ಸ್ವಾತಂತ್ರ್ಯ ಹೋರಾಟಗಾರನಲ್ಲ ಆತನ ಉಪವಾಸ ಸತ್ಯಾಗ್ರಹ ಒಂದು ದೊಡ್ಡ ಡ್ರಾಮಾ ಎಂಬ ವಿವಾದಾತ್ಮಕ ಹೇಳಿಕೆಯನ್ನು ಅನಂತ್ ಕುಮಾರ್ ಹೆಗಡೆ ನೀಡಿದ್ದಾರೆ.

ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಮಹಾತ್ಮಗಾಂಧಿ ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗುತ್ತಿದೆ. ಆದರೆ ಇದು ನಿಜವಲ್ಲ ಬ್ರಿಟಿಷರು ಸತ್ಯಾಗ್ರಹದಿಂದ ಭಾರತವನ್ನು ತೊರೆಯಲಿಲ್ಲ ಎಂಬುದು ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು, ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸಬೇಕು ಎಂಬ ಸೋಗಲಾಡಿತನವನ್ನು ನಾವು ಅಳವಡಿಸಿಕೊಂಡಿಲ್ಲ ಎಂಬುದನ್ನು ನಾವು ಮರೆಯಬಾರದು ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಯಾರು ದೇಶಕ್ಕಾಗಿ ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸಿದರೋ ಅವರೆಲ್ಲ ನೇಣು ಕಂಬಕ್ಕೆ ಕುತ್ತಿಗೆ ಕೊಟ್ಟು ಪ್ರಾಣತೆತ್ತರು. ಯಾರು ತಮ್ಮ ವಿಚಾರಧಾರೆಗಳನ್ನು ಇಟ್ಟುಕೊಂಡು ದೇಶ ಕಟ್ಟಲು ಯತ್ನಿಸಿದರು ಅವರೆಲ್ಲಾ ಕತ್ತಲೆ ಕೋಣೆಯಲ್ಲಿ ಜೀವನ ಕಳೆದರು. ಆದರೆ ಕೆಲವರು ಬ್ರಿಟಿಷರ ಜೊತೆ ಒಪ್ಪಂದ ಮಾಡಿಕೊಂಡು ಸತ್ಯಾಗ್ರಹ ಹೋರಾಟ ಮಾಡಿ ಸ್ವತಂತ್ರ ಹೋರಾಟಗಾರ ಎಂಬ ಪಟ್ಟಿ ಕಟ್ಟಿಕೊಂಡರು,  ಇವರೆಲ್ಲ ಹೇಗೆ ಸ್ವಾತಂತ್ರ್ಯ ಹೋರಾಟಗಾರರು ಆಗುತ್ತಾರೆ?  ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿಯವರು ಪಾತ್ರಧಾರಿಯಾಗಿದ್ದರು ಎಂದು ಅನಂತ್ ಕುಮಾರ್ ಹೆಗ್ಡೆ ಅವರು ಗಾಂಧೀಜಿಯವರ ಬಗ್ಗೆ ಹಗುರವಾದ ಹೇಳಿಕೆಗಳನ್ನು ನೀಡಿದ್ದಾರೆ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ವಿರುದ್ಧ ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here