ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಗುರುವಾರ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಹೊರತಾಗಿ ಕೂಡಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ಬದ್ಧವಾಗಿದೆ ಎಂದು ಹೇಳಿದೆ. ಆದರೆ ಇದೇ ಸಂದರ್ಭದಲ್ಲಿ ತನ್ನ ನಿಲುವು ಕೇಂದ್ರವು ಘೋಷಿಸಿದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಗೆ ವಿರೋಧವಾಗಿಲ್ಲ ಎಂದು ಕೂಡಾ ಹೇಳಿದೆ. ಇಲ್ಲಿನ ಶಿಕ್ಷಣ ಮಂತ್ರಿ ಆದಿಮುಲಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಇಂಗ್ಲಿಷ್ ಅನ್ನು ಪರಿಚಯಿಸುವ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಎನ್.ಇ.ಪಿ. ಬೋಧನಾ ಮಾಧ್ಯಮವು “ಸಾಧ್ಯವಾದಲ್ಲೆಲ್ಲಾ” ಪ್ರಾದೇಶಿಕ ಅಥವಾ ಮಾತೃಭಾಷೆಯಾಗಿರಬೇಕು ಎಂದು ಹೇಳುತ್ತದೆ ಎಂಬ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ನಮ್ಮ ಸರ್ಕಾರವು ಆಂಗ್ಲ ಮಾದ್ಯಮಕ್ಕೆ ಪ್ರಾಧಾನ್ಯತೆ ಕೊಡುತ್ತಿದೆಯಾದರೂ ತೆಲುಗು ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇಂಗ್ಲಿಷ್ ಮಾಧ್ಯಮಕ್ಕೆ ಸಂಬಂಧಿಸಿದ ವಿಷಯ ಸದ್ಯಕ್ಕೆ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಮಾತನಾಡುವುದು ನ್ಯಾಯವಲ್ಲ ಎಂದು ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here