City Big News Desk.
ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿ ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಗ್ಯಾರಂಟಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ಸಾದ್ಯವಾಗದ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ. ನಂತೆ 170ರೂ. ನೀಡಲು ಚಿಂತನೆ ನಡೆಸಿ ಇಂದು ಸಂಜೆ 5:00 ಗಂಟೆ ಸುಮಾರಿಗೆ ಪಡಿತರ ಕಾರ್ಡ್ ದಾರರಿಗೆ ಹಣ ಪಾವತಿಸಲು ನಿರ್ಧರಿಸಿದೆ. ರಾಜ್ಯದಲ್ಲಿ 1.28ಕೋಟಿ ಪಡಿತರ ಕುಟುಂಬಗಳಿವೆ ಅವರಿಗೆ ನೇರ ನಗದು ವರ್ಗಾಣೆಗೆ ಚಾಲನೆ ನೀಡಲಾಗುವುದು ಎಂದು ಅಹಾರ, ನಾಗರೀಕ ಸರಬರಾಜು ಮತ್ತು ವ್ಯವಹಾರಗಳು ಹಾಗೂ ಕಾನೂನು ಮಾಪನ ಸಚಿವರಾದ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ ಅಕ್ಕಿ ಜೊತೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಜುಲೈನಿಂದಲೇ ಹಣ ಪಾವತಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
FCI (ಭಾರತೀಯ ಆಹಾರ ನಿಗಮ) ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳ ಪ್ರಮಾಣಿತ ದರವನ್ನು ನಿಗದಿಪಡಿಸಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗೆ 34 ರುಪಾಯಿ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. ಆದರೆ ನಮಗೆ ಅಗತ್ಯವಿರುವಷ್ಟು ಅಕ್ಕಿಯನ್ನು ಪೂರೈಸಲು ಯಾವುದೇ ಸಂಸ್ಥೆ ಮುಂದೆ ಬಂದಿಲ್ಲ. ಹೀಗಾಗಿ ಅಕ್ಕಿ ಖರೀದಿ ತಡವಾಗುತ್ತಿದೆ. ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಒಂದು ಕಾರ್ಡ್ನಲ್ಲಿ ಒಬ್ಬ ವ್ಯಕ್ತಿ ಇದ್ದರೆ, ಆ ವ್ಯಕ್ತಿಗೆ ಅನ್ನ ಭಾಗ್ಯ ಯೋಜನೆಯಡಿ ಐದು ಕೆಜಿ ಹೆಚ್ಚುವರಿ ಅಕ್ಕಿಗೆ ತಿಂಗಳಿಗೆ 170 ರೂ. ಸಿಗುತ್ತದೆ ಎಂದು ಸಚಿವರು ವಿವರಿಸಿದರು.
ರಾಜ್ಯದಲ್ಲಿ ಅಂದಾಜು 4.42 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆ ಅನುಕೂಲವಾಗಲಿದ್ದು, ಪಡಿತರ ಚೀಟಿಯಲ್ಲಿ ಇಬ್ಬರಿದ್ದರೆ ಅವರು 340 ರೂ.ಗೆ ಅರ್ಹರಾಗಿರುತ್ತಾರೆ. ಐವರು ಸದಸ್ಯರಿದ್ದರೆ ಅವರಿಗೆ ತಿಂಗಳಿಗೆ 850 ರೂಪಾಯಿಯನ್ನು ನೀಡಲಾಗುತ್ತದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ.
ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದರು. ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಹಾಗಾಗಿ ಹಕ್ಕಿಯ ಅಭಾವದಿಂದಾಗಿ ಹಕ್ಕಿಯ ಬದಲು ಹಣ ವರ್ಗಾಯಿಸಲು ಸಂಪುಟದಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳ ಲಾಗಿದೆ ಎಂದರು.
ವರದಿ
ಎಲ್.ಮಂಜುನಾಥ (ಮರಿಯಮ್ಮನಹಳ್ಳಿ)
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.