ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ ಇಂದು. ನಟಸಾರ್ವಭೌಮನ ಹುಟ್ಟುಹಬ್ಬವನ್ನು ಸರ್ಕಾರದಿಂದಲೇ ಆಚರಿಸುವುದಾಗಿ ರಾಜ್ಯದ ಮಾನ್ಯ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ವಿಷಯದ ಕುರಿತಾಗಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಾನ್ಯ ಸಿ ಎಂ ಅವರು
ಈ ಬಗ್ಗೆ ಟ್ವೀಟ್ ಮಾಡಿದ್ದು, ಒಂದು ದಿನ ಮುಂಚಿತವಾಗಿಯೇ ರಾಜ್‍ಕುಮಾರ್ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಆಚರಣೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಅವರು ಕೇಳಿಕೊಂಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಯವರು ಟ್ವೀಟ್ ಮಾಡುತ್ತಾ ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯವಾಗಿದೆ. ನಾಳೆ ಅವರ ಹುಟ್ಟುಹಬ್ಬ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಅವರ ಈ ಟ್ವೀಟ್ ಗೆ ಬಹಳಷ್ಟು ಜನ ರೀ ಟ್ವೀಟ್ ಕೂಡಾ ಮಾಡಿ ಅಣ್ಣಾವ್ರ ಜನ್ಮದಿನದ ಶುಭಾಶಯಗಳು ಕೋರಿದ್ದಾರೆ.

ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ಕುಮಾರ್ ಅವರು ಕರ್ನಾಟಕದ ಹೆಮ್ಮೆ. ಅವರು ನಾಡಿಗೆ ಕೊಟ್ಟ ಕೊಡುಗೆ ಅಪಾರವಾದುದು. ಒಬ್ಬ ನಟನಾಗಿ ಚಿತ್ರರಂಗಕ್ಕೆ, ಒಬ್ಬ ಮೇರು ವ್ಯಕ್ತಿತ್ವದ ಆದರ್ಶ ಜೀವನದ ಉದಾಹರಣೆಯಾಗಿ ನಾಡಿನ ಅನೇಕ ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡಿದವರು. ಅವರು ಇಂದು ನಮ್ಮೊಂದಿಗಿಲ್ಲವಾದರೂ ಅವರು ಹಾಕಿ ಕೊಟ್ಟ ಮಾರ್ಗ, ತಿಳಿಸಿ ಕೊಟ್ಟ ಮೌಲ್ಯಗಳು ಹಾಗೂ ನೀಡಿರುವ ಕೊಡುಗೆಗಳು ಅವರ ಜೀವನದ ಸ್ಮೃತಿಗಳಾಗಿ ಎಲ್ಲರ ಮುಂದೆ ಇವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here