Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

 

 

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತು 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಕೊನೆ ದಿನಾಂಕವಾಗಿದ್ದು, 2023 ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25 ಗಳ ಶುಲ್ಕ ಪಾವತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ದಿನಾಂಕ ಜುಲೈ 1 ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ರೂ. 30 ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-560017, ದೂರವಾಣಿ ಸಂಖ್ಯೆ 080-26612991, 22423867, 26623584 ಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜ ತಿಳಿಸಿದ್ದಾರೆ.