ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಒಂದು ವರ್ಷವಾಗುತ್ತಾ ಬಂದಿದೆ. ಈ ವಿಶೇಷ ಸ್ಥಾನ ಮಾನದ ರದ್ದತಿಯ ಕುರಿತಾಗಿ ಕಳೆದ ಒಂದು ವರ್ಷದಿಂದಲೂ ಪರ ಹಾಗೂ ವಿರೋಧಿ ಮಾತುಗಳು ಕೇಳಿಯೇ ಬರುತ್ತಿವೆ. ಇದರ ನಡುವೆ ಒಂದು ವರ್ಷ ಕಳೆದು ಹೋದ ಹಿನ್ನೆಲೆಯಲ್ಲಿ ಕಾಶ್ಮೀರಿ ಮಹಿಳೆಯೊಬ್ಬರು ಭಾರತ ತ್ರಿವರ್ಣ ಧ್ವಜವನ್ನು ಹಿಡಿದು ತಮ್ಮ ಸಂಭ್ರಮವನ್ನು ಹಂಚಿಕೊಂಡಿದ್ದು, ಈ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿದ್ದು, ಜನರ ಗಮನವನ್ನು ಸೆಳೆಯುತ್ತಿದೆ.‌

ಕಾಶ್ಮೀರದ ಸ್ಥಳೀಯ ಬಿಜೆಪಿ ನಾಯಕಿ ರುಮಿಸ ರಫೀಕ್ ಅವರು ಅನಂತ್ ನಾಗ್ ನ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮವನ್ನು ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದಿಗೆ ಆರ್ಟಿಕಲ್ 370 ರದ್ದಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಹಿನ್ನೆಲೆಯಲ್ಲಿ ಈಗಾಗಲೇ ಅಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here