ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿಯವರು ವಿಧಿ ವಶರಾಗಿದ್ದಾರೆ. ಹಲವು ದಿನಗಳಿಂದ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿತ್ತು. ಆದ ಕಾರಣ ಅವರು ಏಮ್ಸ್ ನಲ್ಲಿ ದಾಖಲಾಗಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಇಂದು ಮಧ್ಯಾಹ್ನ ಇಹ ಲೋಕವನ್ನು ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23ದಂದು ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು.

66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಕೂಡಾ ನಡೆಸಿದ್ದರು. ಅವರ ಆರೋಗ್ಯದ ಕುರಿತಾದ ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಕಳೆದ ಶುಕ್ರವಾರ (ಆಗಸ್ಟ್ 16) ರಾತ್ರಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ಆಸ್ಪತ್ರೆಗೆ ತೆರಳಿ ಅರುಣ್ ಜೇಟ್ಲಿಯವರ ಆರೋಗ್ಯ ವಿಚಾರಿಸಿ ಬಂದಿದ್ದರು.‌

ಇನ್ನು ಇಂದು ವಿದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಷಯ ತಿಳಿಯುತ್ತಲೇ ಅವರು ಸಂತಾಪ ಸೂಚಿಸಿ, ಜೇಟ್ಲಿ ಅವರ ಪತ್ನಿ ಸಂಗೀತ ಮತ್ತು ಅವರ ಪುತ್ರ ರೋಹನ್ ಜೊತೆ ಮಾತನಾಡಿ ಧೈರ್ಯ ಹೇಳಿದ್ದರು. ಆ ಸಂದರ್ಭದಲ್ಲಿ ಅವರ ಕುಟುಂಬದವರು ಮೋದಿಯವರಿಗೆ ವಿದೇಶ ಪ್ರವಾಸವನ್ನು ರದ್ದು ಮಾಡಿಕೊಂಡು ಭಾರತಕ್ಕೆ ಹಿಂದುರುದಂತೆ, ಅವರ ಪ್ರಮುಖ ಕಾರ್ಯಗಳನ್ನು ರದ್ದು ಮಾಡದಂತೆ ಒತ್ತಾಯವನ್ನು ಮಾಡಿದ್ದಾರೆ ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here