ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಹೊಚ್ಚ ಹೊಸ ಸಿನಿಮಾ “ಮದಗಜ” ಚಿತ್ರದ ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 21 ರಿಂದ  ಅದ್ದೂರಿಯಾಗಿ ಮದಗಜ ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದೆ. ಅಯೋಗ್ಯ ಚಿತ್ರದ ಯಶಸ್ವಿ ಯುವ ನಿರ್ದೇಶಕ ಎಸ್.ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಹೆಬ್ಬುಲಿ ಮತ್ತು ರಾಬರ್ಟ್ ಚಿತ್ರಗಳನ್ನು ನಿರ್ಮಿಸಿರುವ ಉಮಾಪತಿ ಶ್ರೀನಿವಾಸ್ ಅವರು “ಮದಗಜ” ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. “ಮದಗಜ” ಹಲವು ದಿನಗಳಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಸಿನಿಮಾ.

 

ಬಿಗ್ ಬಜೆಟ್ಟಿನ ಈ ಚಿತ್ರಕ್ಕಾಗಿ ನಿರ್ದೇಶಕ ಮಹೇಶ್ ಕುಮಾರ್ ಅವರು ಸಾಕಷ್ಟು ಶ್ರಮ ವಹಿಸಿ ಕಥೆ ಚಿತ್ರಕಥೆ ಸಿದ್ದಪಡಿಸಿದ್ದಾರೆ. ಶ್ರೀಮುರಳಿ ಹೊಸ ಅವತಾರದಲ್ಲಿ ರಂಜಿಸಲು ಸಿದ್ದವಾಗಿರುವ ಮದಗಜ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಆ ಕುತೂಹಲಕ್ಕೆ ನಿರ್ದೇಶಕ ಮಹೇಶ್ ಕುಮಾರ್ ಅವರು ಇಂದು ತೆರೆ ಎಳೆದಿದ್ದಾರೆ. ಪ್ರೇಮಿಗಳ ದಿನದ ವಿಶೇಷ ಎಂಬಂತೆ ಮದಗಜ ಚಿತ್ರದ ನಾಯಕಿಯ ಪೋಸ್ಟರ್ ಅನ್ನು ಮದಗಜ ಚಿತ್ರತಂಡ ರಿವೀಲ್ ಮಾಡಿದೆ.

ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕತ್ ಸುದ್ದಿ ಮಾಡುತ್ತಿರುವ ಆಶಿಕಾ ರಂಗನಾಥ್ ಮದಗಜ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.ಇನ್ನುಳಿದಂತೆ ಮದಗಜ ಚಿತ್ರದ ಕಲಾವಿದರ ಆಯ್ಕೆ ಬಹುತೇಕ ಫೈನಲ್ ಆಗಿದ್ದು ಮದಗಜ ಚಿತ್ರದಲ್ಲಿ ದಕ್ಷಿಣ ಭಾರತದ ದಿಗ್ಗಜ ಕಲಾವಿದರು ನಟಿಸಲಿದ್ದಾರೆ ಎಂಬ ಮಾಹಿತಿ ಇದ್ದು ಅದರ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here