ರಾಜ್ಯದಲ್ಲಿ ಕೊರೊನಾ ಮಹಾಮಾರಿಯು ಒಂದೆಡೆ ಕೇಕೆ ಹಾಕುತ್ತಿದ್ದು,ಎಲ್ಲಾ ಕ್ರಮಗಳ ಹೊರತಾಗಿಯೂ ಕೂಡಾ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಭೀತಿ ಕೂಡಾ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ ಡೌನ್ ಬೇಕೋ, ಬೇಡವೋ ಎನ್ನುವ ವಿಷಯದ ಬಗ್ಗೆ ಎಲ್ಲಾ ಕಡೆ ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಹಲವರು ಮತ್ತೊಮ್ಮೆ ಲಾಕ್ ಡೌನ್ ಒಂದೇ ಕೊರೊನ ನಿಯಂತ್ರಣಕ್ಕೆ ಪರಿಹಾರ ಎನ್ನುತ್ತಿದ್ದು, ಕೆಲವು ನಾಯಕರು ಕೂಡಾ ಇದನ್ನು ಸಮರ್ಥನೆ ಮಾಡುತ್ತಿರುವಾಗಲೇ, ಯಾರೋ ಹೇಳ್ತಾರೆ ಅಂತ ಲಾಕ್ ಡೌನ್ ಮಾಡಲು ಆಗಲ್ಲ ಎಂದು ಸಚಿವ ಆರ್ ಅಶೋಕ್ ಅವರು ಹೇಳಿದ್ದಾರೆ.

ಸಭೆ ಆರಂಭವಾಗುವ ಮೊದಲು ಅವರು ಮಾದ್ಯಮಗಳ ಜೊತೆ ಮಾತ‌ನಾಡಿದ್ದು, ಈ ಸಂದರ್ಭದಲ್ಲಿ ಅವರು ಮತ್ತೊಮ್ಮೆ ಲಾಕ್ ಡೌನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳುತ್ತಾರೆ ಅಂತ ಲಾಕ್‍ಡೌನ್ ಮಾಡಲು ಆಗಲ್ಲ ಎ‌ಂದಿದ್ದಾರೆ. ದೇಶ ಹಾಗೂ ಪ್ರಪಂಚದಲ್ಲಿ ಲಾಕ್‍ಡೌನ್ ಇಲ್ಲ. ಎಲ್ಲ ಕಡೆ ಇದ್ದಂತೆ ಇಲ್ಲಿಯೂ ಇರುತ್ತೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಕೊರೊನಾ ನಿಯಂತ್ರಣದ ವಿಷಯದಲ್ಲಿ ‌ನಮ್ಮ ರಾಜ್ಯ ಸರ್ಕಾರ ವೈಫಲ್ಯವಾಗಿಲ್ಲವೆಂದು ಹೇಳುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಆರೋಪಗಳಿಗೆ ತಿರುಗೇಟನ್ನು ಅವರು ನೀಡಿದ್ದಾರೆ.

ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಅವರು ಕೂಡಾ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದಿದ್ದರು. ಅಲ್ಲದೇ ಇಂದು ಸರ್ವ ಪಕ್ಷಗಳ ಸಭೆಯನ್ನು ಕರೆದಿದ್ದು, ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುವುದು ಎಂದಿದ್ದರು. ಅಲ್ಲದೇ ಶಾಸಕರು ಅವರ ವಿಧಾನ ಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದು ಬೆಂಗಳೂರು ಲಾಕ್‍ಡೌನ್ ಪ್ರಸ್ತಾಪ ಇಲ್ಲ ಎಂದಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here