Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

Asia Cup 2023 | INDvsPAK: ಇಂದು ಹೈವೋಲ್ಟೇಜ್ ಮ್ಯಾಚ್

ಕೊಲಂಬೊ: ಏಷ್ಯಾಕಪ್ 2023ರ ಟೂರ್ನಿಯ ಸೂಪರ್-4 ಹಂತದ ಭಾಗವಾಗಿ ಇಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಶ್ರೀಲಂಕಾ ರಾಜಧಾನಿ ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸೂಪರ್-4ನಲ್ಲಿ ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಬಾಬರ್ ಪಡೆ ಮತ್ತೊಂದು ಜಯದತ್ತ ಕಣ್ಣಿಟ್ಟಿದ್ದರೆ, ಇತ್ತ ಟೀಮ್ ಇಂಡಿಯಾ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ವಿಶೇಷವೆಂದರೆ ಇಂದಿನ ಪಂದ್ಯಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಲಭ್ಯವಿದ್ದಾರೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. ಪಾಕಿಸ್ತಾನ್ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).