ಕೊರೊನಾ ವಿಚಾರವಾಗಿ ಇಂದು ಮುಖ್ಯಮಂತ್ರಿಯವರು ಕರೆದಿದ್ದ ಸಭೆಯ ಬಳಿಕ, ರಾಜ್ಯ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಧ್ಯೆ ಮಾತಿಗೆ ಮಾತು ಬೆಳೆದಿರುವ ವಿಚಾರಗಳು ತಿಳಿದು ಬಂದಿದ್ದು ಪೋಲಿಸ್ ಆಯುಕ್ತರು ಡಿಸಿಎಂ ಅವರ ಆರೋಪಗಳಿಂದ ಬೇಸರಗೊಂಡು ಅಲ್ಲಿಂದ ಹೊರ ನಡೆದಿದ್ದು, ಕಣ್ಣೀರು ಹಾಕುತ್ತಾ ತನ್ನನ್ನು ಉದ್ಯೋಗದಿಂದ ಬಿಡುಗಡೆ ಮಾಡಿ ಎಂದು ಮುಖ್ಯಮಂತ್ರಿ ಅವರನ್ನು ಕೇಳಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಇಂತಹುದೊಂದು ಅನಿರೀಕ್ಷಿತ ಬೆಳವಣಿಗೆ ಈ ಸಮಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಇಂದು ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಡಿಸಿಗಳ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಅವರು ಈ ಸಭೆಯ ಬಳಿಕ ಅನ್ ಲೈನ್ ಫುಡ್ ಡೆಲಿವರಿ, ಸಿಬ್ಬಂದಿಗೆ ಪಾಸ್ ನೀಡಬೇಕೆಂದು ಮಾಡಿದ ಆಗ್ರಹಕ್ಕೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೇಡ ಎಂದು ಹೇಳಿದ್ದಾರೆ.
ಅಲ್ಲದೆ ಡಿಸಿಎಂ ಕೆಲವು ಶಾಪ್ ಗಳನ್ನು ಬೇಕಂತಲೇ ಓಪನ್ ಮಾಡಿಸಿ ಕಮೀಷನ್ ಪಡೆಯುತ್ತಿದ್ದೀರಾ? ಎಂದು ಆರೋಪಿಸಿದ್ದಾರೆ.

ಈ ವಿಚಾರಕ್ಕಾಗಿ ಇಬ್ಬರ ನಡುವೆ ನಡೆದ ಮಾತಿನ ಚಕಮಕಿಯಲ್ಲಿ ಅಶ್ವಥ್ ನಾರಾಯಣ್ ಆರೋಪಕ್ಕೆ ಭಾಸ್ಕರ್ ರಾವ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದೀರೆಂದು ತನ್ನ ಅಸಮಾಧಾನ ಹೊರ ಹಾಕಿದ್ದು, ಬೇಸರಗೊಂಡು ನನಗೆ ಪೊಲೀಸ್ ಆಯುಕ್ತ ಹುದ್ದೆಯೇ ಬೇಡ ಎಂದು ಹೇಳಿ ಬೇಸರ ವ್ಯಕ್ತಪಡಿಸಿ ಸಭೆಯಿಂದ ಹೊರ ನಡೆದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here