ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಇಡಿ ವಿಚಾರಣೆಯಲ್ಲಿ ಇರುವ ಡಿಕೆ ಶಿವಕುಮಾರ್ ಅವರ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿ  ಅಶ್ವಥ್  ನಾರಾಯಣ್ ಅವರು ಹೇಳಿರುವ ಹೇಳಿಕೆಗೆ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ. ಜಾರಿ ನಿರ್ದೇಶನಾಲಯದ ಕಚೇರಿಯಿಂದ ಮೂರನೇ ದಿನದ ವಿಚಾರಣೆ ಪೂರ್ಣಗೊಳಿಸಿ ಹೊರಬಂದ ಡಿ.ಕೆ.ಶಿವಕುಮಾರ್ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅಶ್ವತ್ಥ್

ನಾರಾಯಣ್ ಅವರು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ. ರಾಜಕಾರಣ ಮಾಡಲೇಬೇಕೆಂದು ಬಂದವನು ನಾನು ಎಂದು ಈಗಾಗಲೇ ಹೇಳಿದ್ದೇನೆ. ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ನಾನು ಯಾವುದಕ್ಕೂ ಹೆದರುವ ಮಗನಲ್ಲ ಎಂದು ಹೇಳಿದ್ದಾರೆ.ತಂದೆ ಹಾಗೂ ಹಿರಿಯರಿಗೆ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಕಣ್ಣೀರು ಹಾಕಿದ್ದೇನೆ ಹೊರತು ಅನುಕಂಪ ಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯತೆ ನನಗಿಲ್ಲ.

ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ಅಶ್ವತ್ಥ್ ನಾರಾಯಣ ಅವರ ಹೇಳಿಕೆಯನ್ನು ಗಮನಿಸಿದ್ದೇನೆ, ಈಗ ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ. ಅದರಲ್ಲಿ ಅವರು ಯಶಸ್ವಿಯಾಗಲಿ. ರಾಜಕೀಯ ಬಿಟ್ಟು ವ್ಯಾಪಾರಿಯಾಗಲಿ ಎಂದು ಸಲಹೆ ನೀಡಿದ್ದಾರೆ. ಅವರು ಬಹಳ ದೊಡ್ಡವರು, ಅವರ ಸಲಹೆ ಸ್ವೀಕರಿಸುತ್ತೇನೆಂದು ಲೇವಡಿ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here