ರಾಜ್ಯದಲ್ಲಿ ಮುಂದಿನ ಎರಡು ತಿಂಗಳಲ್ಲಿ ಮತ್ತೆ ಕೊರೋನಾ ಹೆಚ್ಚಳವಾಗಲಿದೆ. ಮಳೆಗಾಲದ ಸಂದರ್ಭವಾದಂತ ಆಗಸ್ಟ್, ಸೆಪ್ಟಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮತ್ತಷ್ಟು ಕೊರೋನಾ ಸೋಂಕು ಹೆಚ್ಚಳವಾಗಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಾ.ಸಿಎಸ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.ರಾಜ್ಯದಲ್ಲಿ ಈಗಾಗಲೇ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ.

ರಾಜ್ಯದ ಜನರು ಕೊರೋನಾ ಸೋಂಕಿನ ಭೀತಿಯಿಂದ ನಲುಗಿ ಹೋಗಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅಂತೂ ಕೊರೋನಾ ಹೆಮ್ಮಾರಿ, ರುದ್ರ ನರ್ತನವನ್ನೇ ತೋರುತ್ತಿದೆ. ಇದೇ ವೇಳೆ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಬಿಚ್ಚಿಟ್ಟಿದ್ದಾರೆ.ರಾಜ್ಯದಲ್ಲಿ ಮಳೆಗಾಲದ ಸಂದರ್ಭವಾದಂತ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳವಾಗಲಿದೆ.

ಜನರು ಜಾಗ್ರತೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವಂತೆ ಎಚ್ಚರಿಕೆಯನ್ನು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here