ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಸುಪ್ರೀಂ ಕೋರ್ಟ್ ವಿವಾದಿತ ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿಗೆ ಸಂಬಂಧಿಸಿಂತೆ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, 1992 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದು ತಪ್ಪು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ಇದಕ್ಕಾಗಿ ಅಲ್ಪಸಂಖ್ಯಾತರಿಗೆ ಆರ್ಥಿಕ ಪರಿಹಾರವನ್ನೂ ಘೋಷಿಸಬೇಕಿತ್ತು’ ಎಂದಿದ್ದಾರೆ. ಬಾಬರಿ ಮಸೀದಿ ಧ್ವಂಸ ಮಾಡಿರುವುದು ತಪ್ಪು ಎಂದು ನ್ಯಾಯಾಲಯ ಹೇಳಿರುವುದರಿಂದ, ಅಲ್ಪಸಂಖ್ಯಾತರಿಗೆ ಬೇರೆ ಮಸೀದಿಯನ್ನು ನಿರ್ಮಾಣ ಮಾಡುವುದಕ್ಕೆ ಸುಪ್ರೀಂ ಕೋರ್ಟ್ ಆರ್ಥಿಕ ಪರಿಹಾರವನ್ನೂ ಘೋಷಣೆ ಮಾಡಬೇಕಿತ್ತು ಎಂದಿದ್ದಾರೆ ದೇವೇಗೌಡ ಅವರು. ಘೋಷಿಸಬೇಕಿತ್ತು.

ಮಸೀದಿಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರವೇ ಪರಿಹಾರದ ಮೊತ್ತವನ್ನು ಪಾವತಿ ಮಾಡುವಂತೆ ಕೋರ್ಟ್ ನಿರ್ದೇಶನ ನೀಡಬಹುದಿತ್ತು ಎಂದು ಅವರು ತಮ್ಮ ಅಭಿಪ್ರಾಯದಲ್ಲಿ ತಿಳಿಸಿದ್ದಾರೆ. ಅಲ್ಲದೆ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದದಲ್ಲಿ ಈಗ ಸುಪ್ರೀಂ‌ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದ ಅವರು ಹಿಂದೂ ಧರ್ಮೀಯರು ಬಹು ದಿನಗಳ‌ ಕನಸು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಇದು ಈ ಕನಸು ಈಗ ನನಸಾಗಲಿದೆ ಎಂದು ಹೇಳಿದ್ದಾರೆ.

ಇನ್ನುವದೇವಾಲಯ ನಿರ್ಮಿಸುವ ಹೊಣೆ ಹೊರುವ ಟ್ರಸ್ಟ್‌ನಲ್ಲಿ ಯಾರು ಇರುತ್ತಾರೆ ಎಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ. ಟ್ರಸ್ಟ್ ಆರ್‌ಎಸ್‌ಎಸ್ ಪ್ರತಿನಿಧಿಗಳ ಹಿಡಿತದಲ್ಲೇ ಇರುತ್ತದೋ ಅಥವಾ ಬೇರೆಯವರು ಅದರಲ್ಲಿ ಇರುವರೋ ನೋಡಬೇಕಿದೆ ಎಂದು ದೇವೇಗೌಡ ಅವರು, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಎರಡೂ ಕಡೆ ಬಿಜೆಪಿ ಸರ್ಕಾರಗಳೇ ಇದ್ದು, ಟ್ರಸ್ಟ್‌ನಲ್ಲಿ ಯಾವೆಲ್ಲಾ ಸಮುದಾಯದ ಜನರಿಗೆ ಪ್ರಾತಿನಿಧ್ಯ ನೀಡುವರೆಂಬುದನ್ನು ಗಮನಿಸಬೇಕು ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here