ವಿಶ್ವದ ಗಮನ ಸೆಳೆದಿದ್ದ ಐತಿಹಾಸಿಕ ವಿವಾದ ಎಂದೇ ಬಿಂಬಿತವಾಗಿದ್ದ ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯವನ್ನು ನೀಡುವ ಮೂಲಕ, ಅತಿ ಸೂಕ್ಷ್ಮ ಎನಿಸಿದ್ದ ವಿಷಯಕ್ಕೆ ಒಂದು ನಿರ್ದಿಷ್ಟ ಹಾಗೂ ಸ್ಪಷ್ಟವಾದ ರೂಪವನ್ನು ತನ್ನ ತೀರ್ಮಾನದ ಮೂಲಕ ನೀಡಿ, ರಾಮ ಮಂದಿರ ಸ್ಥಾಪನೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಣಯದ ಕುರಿತು ರಾಜ್ಯದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿ ಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಮಾನ್ಯ ಸಿಎಂ ಯಡಿಯೂರಪ್ಪ ಅವರು ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ಕೋರ್ಟದ ನೀಡಿರುವ ಐತಿಹಾಸಿಕ ತೀರ್ಪನ್ನು ಗೌರವಿಸೋಣ.

ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಉದ್ವೇಗ ಕ್ಕೆ ಒಳಗಾಗಬೇಡಿ. ಯಾರೂ ವಿಜೃಂಭಿಸಬೇಡಿ, ಸಮಾಜದ ಸಾಮರಸ್ಯ ಕದಡದೆ ಶಾಂತಿ ಕಾಪಾಡಿಕೊಳ್ಳಿ ಎಂದು ಟ್ವೀಟ್ ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಇದೇ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು , “ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ.”

#ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ “ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ…” ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುತ್ತಾ, “ರಾಮಜನ್ಮಭೂಮಿ -ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಮ್ ಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ.” ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here