ಬೆಂಗಳೂರಿನ ಹಾಲಿ‌ ಬಿಜೆಪಿ ಶಾಸಕರು ಮತ್ತು ಈ ಬಾರಿಯೂ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಜ್ಜನ ರಾಜಕಾರಣಿ ಬಿ ಎನ್ ವಿಜಯ್ ಕುಮಾರ್ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನೆನ್ನೆ ಮಧ್ಯರಾತ್ರಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಬಿ ಎನ್ ವಿಜಯ್ ಕುಮಾರ್ ವಿಧಿವಶರಾಗಿದ್ದಾರೆ.

ಲಘು ಹೃದಯಾಘಾತವಾಗಿ ಗುರುವಾರ ವಿಜಯ್ ಕುಮಾರ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತರುವಾಗಲೇ ಅವರ ಹೃದಯ ಬಡಿತ, ಬಿಪಿ ಕುಸಿತ ಕಂಡಿತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಅಂತ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಹೇಳಿದ್ದಾರೆ.

ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರು ಜಯನಗರ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು. ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು.

ನಿನ್ನೆ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದು ಬಿದ್ದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು.ರಾಜಕೀಯ ರಂಗದಲ್ಲಿ ಎಲ್ಲ ಪಕ್ಷಗಳ ಮುಖಂಡರು ಸಹ ವಿಜಯ್ ಕುಮಾರ್ ಅವರನ್ನು ಪ್ರೀತಿಸುತ್ತಿದ್ದರು.ಅಜಾತಶತ್ರು ಆಗಿದ್ದ ವಿಜಯ್ ಕುಮಾರ್ ಅವರ ನಿಧನದಿಂದ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here