ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿದ ನಂತರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕೂಡಾ ಪರಿಸ್ಥಿತಿ ಭಿನ್ನವಾಗಿಯೇನು‌ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಆಗಬಹುದೆನ್ನುವ ಮಾತುಗಳು ಆಗಾಗ ಕೇಳಿ ಬರುತ್ತಿದ್ದವು. ಕೆಲವರು ಮಾದ್ಯಮಗಳ ಮೂಲಕ ಕೂಡಾ ಮತ್ತೆ ಲಾಕ್ ಡೌನ್ ಬೇಕು ಎನ್ನುವುದು ಕೂಡಾ ಕೇಳಿ ಬಂದಿತ್ತು. ಆದರೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್ ಡೌನ್ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಅಲ್ಲದೇ ಭಾನುವಾರಗಳಂದು ಲಾಕ್ ಡೌನ್ ಸೂಚನೆ ನೀಡಿದ್ದರು.

ಈಗ ಇದೇ ಲಾಕ್ ಡೌನ್ ವಿಚಾರವಾಗಿ ಮಾನ್ಯ ಆರೋಗ್ಯ ಸಚಿವರಾದ ಶ್ರೀ ರಾಮುಲು ಅವರು ದಾವಣಗೆರೆ ನಗರದಲ್ಲಿ ಮಾತನಾಡುವ ಸಂದರ್ಭದಲ್ಲಿ ಮತ್ತೊಮ್ಮೆ ಲಾಕ್​ಡೌನ್ ಮಾಡುವ ಸೂಚನೆಯೊಂದನ್ನು ನೀಡಿದ್ದಾರೆ. ಅವರು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ರಾಜ್ಯದ ಯಾವ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆಯೋ ಅಂತಹ ಕಡೆಗಳಲ್ಲಿ ಮತ್ತೊಮ್ಮೆ ಮತ್ತೆ ಲಾಕ್​ಡೌನ್​ ಮಾಡುತ್ತೇವೆ ಎಂದು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ
ಜುಲೈ 6 ರ ನಂತರ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿಯಾಗಲಿದೆ ಎನ್ನುವ ಮಾತು ಕೂಡಾ ಕೇಳಿ ಬಂದಿತ್ತು.

ಈ ವಿಷಯವಾಗಿ ಸರ್ಕಾರ ಮಾತ್ರ ಯಾವುದೇ ಘೋಷಣೆಯನ್ನು ಅಥವಾ ನಿರ್ಧಾರವನ್ನು ಅಧಿಕೃತವಾಗಿ ಹೇಳಿಲ್ಲ. ರಾಜ್ಯದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆಗಳು ಮುಗಿದ ನಂತರದಲ್ಲಿ ಲಾಕ್​ಡೌನ್ ಜಾರಿ ವಿಚಾರದ ಬಗ್ಗೆ ನಿರ್ಧಾರವನ್ನು ಮಾಡಲಾಗುವುದು ಎಂದು ಸಚಿವರು ಈ ಹಿಂದೆ ಒಮ್ಮೆ ಹೇಳಿದ್ದರು. ಇದೀಗ ಪರೀಕ್ಷೆಗಳು ಕೂಡಾ ಯಶಸ್ವಿಯಾಗಿ ಮುಗಿದಿದ್ದು ಈ ಸಂದರ್ಭದಲ್ಲಿ ಶ್ರೀರಾಮುಲು ಅವರು ಮತ್ತೊಮ್ಮೆ ಲಾಕ್​ಡೌನ್ ಬಗ್ಗೆ ಹೇಳಿರುವುದು ಎಲ್ಲರ ಗಮನವನ್ನು ಸೆಳೆದಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here