ಭಾನುವಾರ ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ನಿಯಮ ಜಾರಿಗೆ ತಂದಿದ್ದರೂ ಸಹ ಬೆಂಗಳೂರು ಸಿಟಿಯಲ್ಲಿ ಲಾಕ್ ಡೌನ್  ನಿಯಮ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಅಲ್ಲಲ್ಲಿ ರಸ್ತೆಗಳಲ್ಲಿ ವಾಹನ ಸಂಚಾರ ಯಥೇಚ್ಛವಾಗಿ ಕಾಣಬಹುದಾಗಿದೆ.ಇದರ ಪರಿಣಾಮ ಎಂಬಂತೆ ಇಂದು ಸಂಜೆ ಬೆಂಗಳೂರಿನ ಹೊಸೂರು ರಸ್ತೆಯ ಸಿಂಗಸಂದ್ರದ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಈ ವೇಳೆ ಅಪಘಾತದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಟೋ ಡ್ರೈವರ್ ಗಳು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಸಿಂಗಸಂದ್ರದ ಬಳಿ ಬೈಕ್ನಲ್ಲಿ ಕುಡಿದು

ಬರುತ್ತಿದ್ದ ವ್ಯಕ್ತಿಯೊಬ್ಬ ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಬೈಕ್ನಲ್ಲಿ ಕುಡಿದು ಬರುತ್ತಿದ್ದ ವ್ಯಕ್ತಿಯೊಬ್ಬ ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೂ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಸ್ಥಳದಲ್ಲಿದ್ದ ಆಟೋ ಚಾಲಕರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಆಂಬುಲೆನ್ಸ್ ಮೂಲಕ ಪರಪ್ಪನ ಅಗ್ರಹಾರದ ಬಳಿಯಿರುವ ಬ್ಲಾಸಮ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಭಾನುವಾರ ಕರ್ಫ್ಯೂ

ಜಾರಿಯಲ್ಲಿದ್ದರೂ ಸಹ ಬೈಕ್ ಅನ್ನು ಕುಡಿದು ರಸ್ತೆಗೆ ತಂದಿರುವುದೇ ಅಪಘಾತಕ್ಕೆ ಮೂಲ ಕಾರಣವಾಗಿದೆ ಎಂದು ತಿಳಿದುಬಂದಿದೆ. ಇನ್ನು ಸೈಕಲ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯು ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯ ಆಟೋ ಚಾಲಕರು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here