ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚನ್ನಣ್ಣನವರ್​ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ನಿದ್ದೆ ಮಂಪರಿನಲ್ಲಿದ್ದ ರೌಡಿಗಳಿಗೆ ಶಾಕ್ ನೀಡಿದ್ದಾರೆ. ನಸುಕಿನ ಜಾವ 3 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ದಾಳಿ ನಡೆಸಿ, ಅಂದಾಜು 150ಕ್ಕೂ ಹೆಚ್ಚು ರೌಡಿಶೀಟರ್​ಗಳನ್ನು ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಪೊಲೀಸ್ ಠಾಣಾ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿಸಿಪಿ ರವಿ ಚನ್ನಣ್ಣನವರ್ ಅವರ ನೇತೃದಲ್ಲಿ ಮುಂಜಾನೆ ನಾಲ್ಕು ಗಂಟೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಇನ್ನೂ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಫೋಷಣೆಯಾಗುತ್ತದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಡಿಸಿಪಿ ರವಿ ಚನ್ನಣ್ಣನವರ್ ಅವರು ರೌಡಿಶೀಟರ್ ಗಳಿಗೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗಬಾರದೆಂದು ಎಚ್ಚರಿಸಲು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ರೌಡಿಗಳು ಮಲಗಿದ್ದಾಗಲೇ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಕೆಲ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಮಂದಿ ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ..ಇತ್ತೀಚೆಗಷ್ಟೇ ಹಾಡಹಗಲ್ಲೇ ರೌಡಿ ಲಕ್ಷ್ಮಣನನ್ನು ನಡುರಸ್ತೆಯಲ್ಲೆ ಕೊಲೆ ಮಾಡಲಾಗಿತ್ತು.

ನಗರದಲ್ಲಿ ರೌಡಿ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವುದನ್ನು ಮನಗಂಡು ನಗರ ಪೊಲೀಸ್​ ಆಯುಕ್ತ ಟಿ. ಸುನೀಲ್​ ಕುಮಾರ್​ ಸೂಚನೆ ಮೇರೆಗೆ ಈ ದಾಳಿ ನಡೆದಿದೆ. ದಾಳಿ ವೇಳೆ ಅನೇಕ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್​ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here