ಒಂದೆಡೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನ ಹೆಚ್ಚು ಜಾಗರೂಕರಾಗಿರಬೇಕು ಎಂಬ ಹೆಸರು ಎಚ್ಚರಿಕೆಗಳನ್ನು ಸತತವಾಗಿ ನೀಡಲಾಗುತ್ತಿದೆ. ಆದರೆ ಇದೆಲ್ಲದರ ಹೊರತಾಗಿಯೂ ಇಂದಿನ ವರ ಮಹಾಲಕ್ಷ್ಮಿ ಹಬ್ಬದ ಹಾಗೂ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜನರು ಮೈಮರೆತಂತೆ ಮುನ್ನೆಚ್ಚರಿಕೆಯ ಕ್ರಮ ಗಳಾದ ಸಾಮಾಜಿಕ ಅಂತರ ಕಾಯುವುದು, ಮಾಸ್ಕ್ ಧರಿಸುವುದನ್ನು ಗಾಳಿಗೆ ತೂರಿ ಮಾರುಕಟ್ಟೆಯಲ್ಲಿ ಹೂವು, ಹಣ್ಣು ಖರೀದಿ ಮಾಡುತ್ತಿದ್ದು, ಈ ವಿಚಾರವಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಡಾ. ರೋಹಿಣಿ ಕಟೋಚ್ ಅವರ ತಂಡ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಅನೇಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹಾಗೂ ನಿರ್ಗಮಿತ ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಅವರು, ಜನರು ಕೊರೊನಾ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಎನ್.ಡಿ.ಎಂ.ಎ ಕಾಯ್ದೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಇತ್ತೀಚಿಗಷ್ಟೇ ಪೊಲೀಸ್​ ಸಿಬ್ಬಂದಿಗೆ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ವಿಭಾಗದ ಪೊಲೀಸರು ನಿಯಮ ಉಲ್ಲಂಘನೆ ಮಾಡಿದ 100 ಮಂದಿ ವಿರುದ್ಧ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here