ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ಆರ್ಭಟದ ನಡುವೆಯೇ ಬೆಂಗಳೂರು ನಗರ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಅವರ ಎತ್ತಂಗಡಿಯಾಗಿದೆ. ಹೌದು ಸರ್ಕಾರ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿದ್ದು, ಈ ವಿಷಯ ಇದೀಗ ಸಾಕಷ್ಟು ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ. ಇನ್ನು ಅವರ ಸ್ಥಾನದಲ್ಲಿ ಪ್ರಸ್ತುತ ಬೆಂಗಳೂರು ನಗರ ನೂತನ ಪೋಲಿಸ್ ಆಯುಕ್ತರಾಗಿ ಕಮಲ್ ಪಂತ್ ಅವರು ನೇಮಕಗೊಂಡಿದ್ದಾರೆ. ಈ ವಿಚಾರವಾಗಿ ರಾಜ್ಯ ಸರ್ಕಾರದಿಂದ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ವರ್ಗಾವಣೆಗೊಂಡಿರುವ ಭಾಸ್ಕರ್ ರಾವ್ ಅವರ ಸ್ಥಾನಕ್ಕೆ ಆಂತರಿಕ ವಿಭಾಗದ ಎಡಿಜಿಪಿ ಆಗಿರುವಂತಹ ಕಮಲ್ ಪಂತ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಇನ್ನು ರಾಜ್ಯ ಸರ್ಕಾರದಿಂದ ಹೊರ ಬರುವ ಅಧಿಕೃತ ಘೋಷಣೆಯೊಂದು ಮಾತ್ರವೇ ಉಳಿದಿದೆ ಎನ್ನಲಾಗಿದೆ. ಭಾಸ್ಕರ್ ರಾವ್ ಅವರ ವರ್ಗಾವಣೆ ತೀವ್ರ ಕುತೂಹಲವನ್ನು ಕೆರಳಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here