ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸಂಸದರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು, ಇದರ ಪರಿಣಾಮವಾಗಿ ಶಾಸಕರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸನ್ನು ಜಾರಿ ಮಾಡಿದ್ದು, ಹತ್ತು ದಿನಗಳ ಅವಧಿಯಲ್ಲಿ ಸೂಕ್ತ ಉತ್ತರ ನೀಡುವಂತೆ ಅವರಿಗೆ ತಾಕೀತು ಮಾಡಲಾಗಿದೆ. ಈ ನೋಟೀಸ್ ವಿಚಾರದಲ್ಲಿ
ಪ್ರತಿಕ್ರಿಯೆಯನ್ನು ನೀಡಿರುವ ಶಾಸಕರು
ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಯಾವ ಶಕ್ತಿಯೂ ನಮ್ಮನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದು, ಕೇಂದ್ರದಿಂದ ನೀಡಿರುವ ನೋಟೀಸ್ ಇನ್ನೂ ಸಿಕ್ಕಿಲ್ಲ, ಆದರೆ ಅದು ಕೈ ಸೇರಿದ ನಂತರ ಅದರ ಬಗ್ಗೆ ಸೂಕ್ತವಾಗಿ ಚರ್ಚಿಸಿ ಉತ್ತರಿಸುವುದಾಗಿ ಹೇಳಿದ್ದಾರೆ.

ಶೋಕಾಸ್ ನೋಟೀಸ್ ಬಗ್ಗೆ ವಿಜಯಪುರದಲ್ಲಿ ಮಾತನಾಡಿರುವ ಯತ್ನಾಳ್ ಅವರು ಕಳೆದ 40 ವರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದು, ಶಾಸಕ, ಲೋಕಸಭಾ ಸದಸ್ಯ, ಕೇಂದ್ರದ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯನಾಗಿ ಸೇವೆಯನ್ನು‌ ಸಲ್ಲಿಸಿದ್ದು, ನನಗೆ ಏನು ಮಾತನಾಡಬೇಕು ಎಂಬುದರ ಅರಿವಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಸರಕಾರದ ವಿರುದ್ಧ ಮಾತನಾಡಿಲ್ಲ, ಸರಕಾರ ಕೆಡವಿಲ್ಲ. ಕನ್ನಡಿಗರಿಗೆ ಅನ್ಯಾಯವಾದಾಗ ನಾನು ಧ್ವನಿ ಎತ್ತಲು ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಯಾರಿಂದಲೂ ಬುದ್ದಿವಾದ ಹೇಳಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ. ಕನ್ನಡ ನಾಡಿನ ಜನರ ಪರವಾಗಿ ಮೋದಿಯವರಿಗೆ ‌ವಿಷಯವನ್ನು ಗಮನಕ್ಕೆ ತಂದಿದ್ದೇನೆ. ಅಲ್ಲದೆ ಮುಂದೊಂದು ದಿನ ಪ್ರಧಾನಿ ಮೋದಿಯವರು ನನ್ನ ನಿಷ್ಠೆ ಯ ಬಗ್ಗೆ ಶಹಬ್ಬಾಸ್ ಎನ್ನುವ ದಿನ‌ ಬಂದೇ ಬರುತ್ತದೆ ಎನ್ನುವ ವಿಶ್ವಾಸದ ಮಾತುಗಳನ್ನು ಅವರು ಆಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here