ಶಾಸಕ ಬಸನಗೌಡ ಯತ್ನಾಳ್ ಪಾಟೀಲ್ ಅವರು ಮಾತನಾಡುತ್ತಾ ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು, ಅವರಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಬೇಕೆಂದು ವ್ಯಂಗ್ಯವಾಡಿದ್ದಾರೆ. ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಮಾದ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಅವರು ಮಂಗಳೂರು ಬಾಂಬ್ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯೆಗಳನ್ನು ನೀಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸಿಕ್ಕ ಬಾಂಬ್ ಮತ್ತು ಅದನ್ನು ನಿಷ್ಕ್ರಿಯಗೊಳಿಸಿದ್ದನ್ನು ಅಣಕು ಪ್ರದರ್ಶನದಂತಿದೆ ಎಂದಿರುವ ಮಾಜಿ ಸಿಎಂ ಅವರ ಹೇಳಿಕೆ ನಾಚಿಕೆಗೇಡಿನ ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳಾಗಿವೆ ಎಂದು ಯತ್ನಾಳ್ ಅವರು ಟೀಕೆ ಮಾಡಿದ್ದು, ಅವರು ಸಿಎಂ ಆಗಿದ್ದು ಅಣಕು ಪ್ರದರ್ಶನದಂತಿದೆ ಎಂದಿದ್ದು, ಅವರ ಜೀವನ ಹಾಗೂ ರಾಜಕೀಯ ಅಣಕು ಪ್ರದರ್ಶನದಂತೆ ಇದೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ ಕುಮಾರಸ್ವಾಮಿ ಅವರಿಗೆ ದೇಶ, ಸೈನಿಕರು, ರಾಜ್ಯದ ಹಿತ ಯಾವುದೂ ಕಾಣಿಸುವುದಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಈ ಮೂಲಕ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಹೇಳಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲಿ ಬಂಧಿತನಾಗಿರುವ ಆದಿತ್ಯ ರಾವ್ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿ ಎಂದು ಕರೆದಿದ್ದು, ಪೋಲಿಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ್ದಾರೆ. ಗೃಹ ಸಚಿವರು ಕೂಡಾ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆಂದು ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here