ಮುಂಬೈನಲ್ಲಿರುವ ಅತೃಪ್ತ ಶಾಸಕರ ಪೈಕಿ ಇಬ್ಬರು ನನಗೆ ಫೋನ್ ಮಾಡಿ ವಿಚಾರಣೆ ನಡೆಸಿದ್ದರು ಎಂದು ಹೇಳಿರುವ ಸಿದ್ದರಾಮಯ್ಯನವರ ಮಾತಿಗೆ ಮುಂಬೈ ಅತೃಪ್ತ ಶಾಸಕರ ಪೈಕಿ ಒಬ್ಬರಾದ ಬಿಸಿ ಪಾಟೀಲ್ ಅವರು ನಮಗೆ ಯಾವ ನಾಯಕರು ದೂರವಾಣಿ ಮೂಲಕ ಸಂಪರ್ಕ ಮಾಡಿಲ್ಲ ಮತ್ತು ನಾವು ಯಾರ ಜೊತೆ ಸಹ ದೂರವಾಣಿ ಮೂಲಕ ಮಾತುಕತೆ ಆಡಿಲ್ಲ ಎಂದು ಬಿಸಿ ಪಾಟೀಲ್ ತಿಳಿಸಿದ್ದಾರೆ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಯಾರ ಮಾತನ್ನು ಸಹ ಕೇಳುವುದಿಲ್ಲ ಅದು ಯಾರದೇ ವಿಷಯವಾದರೂ ಅಷ್ಟೇ ನಮ್ಮ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಬಿಸಿ ಪಾಟೀಲ್ ಇದೇವೇಳೆ ತಿಳಿಸಿದ್ದಾರೆ. ನಾವು ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿಲ್ಲ ಆದರೂ

ಸಹ ಸುಮ್ಮನೆ ನಾವು ಮಾತನಾಡಿದ್ದೇವೆ ಎಂಬ ಹೇಳಿಕೆ ಕೊಡುವ ಮೂಲಕ ಜನರನ್ನು ದಾರಿತಪ್ಪಿಸುವ ಪ್ರಯತ್ನ ಇದಾಗಿದ್ದು ನಾವು ಯಾವುದೇ ಕಾರಣಕ್ಕೂ ಮನಸ್ಸು ಬದಲಿಸುವುದಿಲ್ಲ ನಮಗೆ ಭಯ ಪಡಿಸುವ ಸಲುವಾಗಿ ಮೂರು ಜನ ಶಾಸಕರನ್ನು ಅನರ್ಹ ಮಾಡಿದ್ದಾರೆ ಆದರೆ ನಾವು ಒಗ್ಗಟ್ಟಿನಿಂದ ಇಲ್ಲಿಗೆ ಬಂದಿದ್ದೇವೆ.ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಸೋಮವಾರ ನಡೆಯುವ ವಿಶ್ವಾಸ ಮತಯಾಚನೆಗೆ ಸಹ ನಾವು ಭಾಗವಹಿಸುವುದಿಲ್ಲ ಎಂದು ಶಾಸಕ ಬಿಸಿ ಪಾಟೀಲ್ ತಿಳಿಸಿದ್ದಾರೆ.. ಕಾಂಗ್ರೆಸ್ ನಾಯಕರು ಈಗ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಆದರೆ ಆಗ ತಮಗೆ ಸ್ಥಾನ ನೀಡುವ ವಿಷಯದಲ್ಲಿ ಯಾರೂ ಸಹ ನಮ್ಮನ್ನು ಸಂಪರ್ಕಿಸುವ ಪ್ರಯತ್ನ ಮಾಡಲಿಲ್ಲ ಆದರೆ ಈಗ ರಾಜೇನಾಮೆ ಕೊಟ್ಟು ಬಂದ ನಂತರ ಅಧಿಕಾರ ಕಳೆದುಕೊಳ್ಳುತ್ತಿರುವ ಭಯದಲ್ಲಿ ಮಂತ್ರಿ ಸ್ಥಾನ ನೀಡುತ್ತೇವೆ ಎಂದು ಹೇಳುತ್ತಾರೆ ಆಗ ನಮ್ಮ ಮಾತಿಗೆ

ಗೌರವ ಕೊಡದವರು ಈಗ ಹೇಗೆ ನಮ್ಮನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಬಿಸಿ ಪಾಟೀಲ್ ಕಿಡಿಕಾರಿದ್ದಾರೆ. ನಮಗೆ ಯಾರೂ ಸಹ ಫೋನ್ ಮಾಡಿಲ್ಲ ನಾವು ಕೂಡ ಯಾರಿಗೂ ಫೋನ್ ಮಾಡುವುದಿಲ್ಲ. ಅಷ್ಟೇ ಅಲ್ಲದೆ ನಾವು ಯಾರು ಸಹ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಿಸಿ ಪಾಟೀಲ್ ತಿಳಿಸಿದ್ದಾರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಯಾರ ಮಾತನ್ನು ಸಹ ಕೇಳುವುದಿಲ್ಲ ಅದು ಯಾರದೇ ವಿಷಯವಾದರೂ ಅಷ್ಟೇ ನಮ್ಮ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಬಿಸಿ ಪಾಟೀಲ್ ಇದೇ ವೇಳೆ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here