ರಾಜ್ಯದಲ್ಲಿ ಲಾಕ್ ಡೌನ್ ಮುಗಿಯಲು ಕೆಲವು ದಿನಗಳು ಇರುವಾಗಲೇ, ಲಾಕ್ ಡೌನ್ ಅವಧಿ ಮುಗಿದ ಕೂಡಲೇ ಸೀಲ್ ಡೌನ್ ಆಗುವುದು ಎಂಬ ಸುದ್ದಿ ಈಗಾಗಲೇ ಸದ್ದು ಮಾಡಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಕಾಡಿರುವುದು ಸಹಜ. ಅಲ್ಲದೆ ಮಾದ್ಯಮಗಳಲ್ಲಿ ಕೂಡಾ ಸೀಲ್ ಡೌನ್ ವಿಚಾರಗಳು ಸುದ್ದಿಯಾಗಿವೆ. ಕೊರೊನಾ ನಿಯಂತ್ರಣಕ್ಕೆ ಸೀಲ್ ಡೌನ್ ಅನಿವಾರ್ಯ ಎಂಬ ಮಾತುಗಳು ಕೇಳಿ ಬಂದಿವೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುವುದೋ ಅವುಗಳನ್ನು ಡೇಂಜರ್ ಝೋನ್ ಎಂದು ಗುರುತಿಸಲಾಗುವುದು.

ಹೀಗೆ ಗುರುತಿಸಲಾದ ಪ್ರದೇಶಗಳಲ್ಲಿ ಸೀಲ್ ಡೌನ್ ಮಾಡಲಾಗುತ್ತದೆ ಎಂಬ ಸುದ್ದಿಯೊಂದು ಮಾದ್ಯಮಗಳಲ್ಲಿ ವಿವರಿಸಲ್ಪಡುತ್ತಿದೆ. ಅಲ್ಲದೆ ಬೆಂಗಳೂರು ನಗರದ ಕೆಲವು ಸೂಕ್ಷ್ಮ ಪ್ರದೇಶಗಳನ್ನು ಕೂಡಾ ಸೀಲ್ ಡೌನ್ ಮಾಡಲಾಗುವುದು ಎಂದು ತೀರ್ಮಾನಿಸಲಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೋಲಿಸ್ ಆಯುಕ್ತರು ಎಲ್ಲಾ‌ ಡಿಸಿಪಿ ಗಳ ಸಭೆಯನ್ನು ಕರೆಯಲಿದ್ದು ಅಂತಿಮ ನಿರ್ಧಾರವನ್ನು ಮಾಡಲಿದ್ದಾರೆ ಎನ್ನುವ ಸುದ್ದಿ ಇತ್ತು. ಈ ಸುದ್ದಿಗೆ ಈಗ ಸ್ಪಷ್ಟವಾದ ಉತ್ತರವು ಬೆಂಗಳೂರು ಪೋಲಿಸ್ ಆಯುಕ್ತರಾದ ಭಾಸ್ಕರ್ ರಾವ್ ಅವರ ಕಡೆಯಿಂದ ದೊರೆತಿದೆ.

ಭಾಸ್ಕರ್ ರಾವ್ ಅವರು ಬೆಂಗಳೂರಿನಲ್ಲಿ ಸದ್ಯಕ್ಕೆ ಸೀಲ್ ಡೌನ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಭಾಸ್ಕರ್ ರಾವ್ ಅವರು ಟ್ವೀಟ್ ಒಂದನ್ನು ಮಾಡಿದ್ದು
ಬೆಂಗಳೂರು ಸೀಲ್‌ ಡೌನ್ ಆಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇದರ ಬಗ್ಗೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆದರೆ ಯಾರೂ ಕೂಡಾ ಈ ಕುರಿತಾಗಿ ಆತಂಕ ಪಡುವ ಅಗತ್ಯವಿಲ್ಲ. ಸದ್ಯಕ್ಕೆ ನಗರದಲ್ಲಿ ಇಂತಹ ಪರಿಸ್ಥಿತಿ ಬಂದಿಲ್ಲವೆಂದೂ, ಜನರನ್ನು ಆರಾಮವಾಗಿರಿ” ಟ್ವೀಟ್ ನಲ್ಲಿ ಅವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here