ಕರ್ನಾಟಕ ರಾಜ್ಯದಲ್ಲಿ ಪ್ರತಿದಿನ ಕೋರ್ಟ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಇಲ್ಲವಾಗಿದೆ. ಕೋವಿಡ್ ಸೋಂಕಿತರಿಗೆ ವ್ಯವಸ್ಥೆ ಹಾಗೂ ಸೂಕ್ತ ಚಿಕಿತ್ಸೆಗಾಗಿ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ ಇದೀಗ ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ವಸ್ತು ಪ್ರದರ್ಶನಾಲಯವನ್ನು ಕೋವಿಡ್ ಸೋಂಕಿತರ ಹಾರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನೂತನವಾಗಿ 10,000 ಹಾಸಿಗೆಗಳೊಂದಿಗೆ ಸಜ್ಜುಗೊಂಡಿರುವ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಈ ಕೇಂದ್ರವು ಭಾರತದಲ್ಲೇ ಬೃಹತ್ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವಾಗಿದೆ. 10,100 ಹಾಸಿಗೆಯ ವ್ಯವಸ್ಥೆಯನ್ನು ಲಕ್ಷಣ ರಹಿತ ರೋಗಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಮತ್ತು ವಯಸ್ಕರ ಮನರಂಜನೆಗಾಗಿ ಎಲ್ ಇಡಿ ಪರದೇಗಳಿವೆ. ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕಯುಕ್ತ ಹಾಸಿಗೆಗಳ ಪ್ರತ್ಯೇಕ ವಿಭಾಗವಿದೆ.ಆರೈಕೆ ಕೇಂದ್ರದಲ್ಲಿ 150 ನುರಿತ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ.ಅಲ್ಲದೆ ಸೂಕ್ತ ಆಹಾರದ ವ್ಯವಸ್ಥೆ, ಶೌಚಾಲಯ, ಅಗತ್ಯ ಸೇವೆಗಳನ್ನು ಕಲ್ಪಿಸಲಾಗಿದೆ..

ಇಂದು ಬೆಂಗಳೂರಿನ ಬಿಬಿಎಂಪಿ ಕಮಿಷನರ್ ಹಾಗೂ ಬಿಬಿಎಂಪಿಯ ಇನ್ನಿತರ ಅಧಿಕಾರಿಗಳು ತುಮಕೂರು ರಸ್ತೆಯ ವಸ್ತು ಪ್ರದರ್ಶನಾಲಯದಲ್ಲಿ ಸಿದ್ಧವಾಗುತ್ತಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ನಡೆಯುತ್ತಿರುವ ಕಾರ್ಯಗಳನ್ನು ಪರಿಶೀಲಿಸಿದರು. ಈಗಾಗಲೇ ಬಹುತೇಕ ಕೆಲಸಗಳು ಮುಗಿಯುವ ಹಂತಕ್ಕೆ ಬಂದಿದ್ದು ಅತಿಶೀಘ್ರದಲ್ಲಿ ಕೋವಿಡ್ ಕೇರ್ ಸೆಂಟರ್ ರೋಗಿಗಳಿಗೆ ಚಿಕಿತ್ಸೆಗಾಗಿ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here