ಕನಕಪುರ ಬಂಡೆ ಮತ್ತು ಟ್ರಬಲ್ ಶೂಟರ್ ಎಂದು ಪ್ರಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ನಲ್ಲಿ ಮಹತ್ವದ ಹುದ್ದೆ ನೀಡಲು ಕಾಂಗ್ರೇಸ್ ಅಧಿನಾಯಕಿ ಮತ್ತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಗಾಂದಿ ಅವರು ತಿರ್ಮಾನಿಸಿದ್ದಾರೆ..
ನೆನ್ನೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂದಿ ಅವರು ಡಿ.ಕೆ‌.ಶಿವಕುಮಾರ್ ಅವರಿಗೆ ಬುಲಾವ್ ನೀಡಿದರು. ಇವರ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಮುಂದೆ ನಿಮಗೆ ಕರ್ನಾಟಕ ಕಾಂಗ್ರೇಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ ಎಂದು ತಿಳಿಸಿದರು ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಬಹಳ ಸಲ ಶಾಸಕರಾಗಿ ಹಾಗೂ ಕರ್ನಾಟಕದ ಮಂತ್ರಿಗಳಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಹಾಗೂ ದೇಶದಲ್ಲಿ ಕಾಂಗ್ರೇಸ್ ಪಕ್ಷ ಸಂಕಷ್ದದಲ್ಲಿ ಇದ್ದಾಗ ಹಲವು ಸಲ ಪಾರು ಮಾಡಿದ್ದಾರೆ..ಅವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರನ್ನಾಗಿ ಮಾಡಿದರೆ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬಹುದು ಎಂಬ ಲೆಕ್ಕಾಚಾರದಲ್ಲಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ಇದೇ ಸಂಧರ್ಭದಲ್ಲಿ ತಿಳಿಸಿದರು ಎನ್ನಲಾಗಿದೆ….

ಪ್ರತಿಪಕ್ಷದ ನಾಯಕರಾಗಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಗೆ ಮುಂದುವರೆಸಿಕೊಂಡು ಹೋಗಿ ಎಂದು ಇದೇ ಸಂಧರ್ಭದಲ್ಲಿ ತಿಳಿಸಲಾಗಿದೆ ಎಂದು ಬಲ್ಲ ಮೂಲಗಳ ಪ್ರಕಾರ ತಿಳಿದು ಬಂದಿದೆ..
ಡಿ.ಕೆ.ಶಿವಕುಮಾರ್ ಅವರನ್ನು ಮುಂದಿನ ವಾರ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಘೋಷಣೆ ಮಾಡುವುದೊಂದೆ ಬಾಕಿ ಇದೆ ಎಂದು ಕರ್ನಾಟಕ ಕಾಂಗ್ರೇಸ್ ಪಕ್ಷ ತಿಳಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here