ಯಾಕೋ ಕಾಣೆ ಕನ್ನಡ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ನವರಿಗೆ ನಸೀಬು ಸರಿಯಿಲ್ಲ ಎಂದು ಕಾಣುತ್ತಿದೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮ ಇನ್ನಿಂಗ್ಸ್ ಆರಂಭಿಸಿದ ರಶ್ಮಿಕ ಮಂದಣ್ಣ ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕೆಲವು ದಿನಗಳು ಕಳೆದ ನಂತರ  ರಕ್ಷಿತ್ ಶೆಟ್ಟಿ ಜೊತೆಗಿನ ಪ್ರೇಮ ಸಂಬಂಧವನ್ನು ರಶ್ಮಿಕಾ ಮಂದಣ್ಣಾ  ಅವರು ಮುರಿದುಕೊಂಡಿದ್ದರು. ನಂತರ ತೆಲುಗು ಚಿತ್ರಗಳಲ್ಲಿ ಬಿಜಿಯಾಗಿದ್ದರು.  ತೆಲುಗು ಚಿತ್ರರಂಗದ ವಿಜಯ್ ದೇವರಕೊಂಡ ಜೊತೆ ಹೆಚ್ಚು ಗಾಸಿಪ್ ನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು.

ಇದೀಗ  ದಕ್ಷಿಣ ಭಾರತ ಚಿತ್ರೋದ್ಯಮದಲ್ಲಿ ಪ್ರಮುಖ ನಟಿಯಾಗಿ ಗುರುತಿಸಿಕೊಂಡ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ಬಹಿಷ್ಕರಿಸಿ ಎಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೋಮವಾರ ದೂರು ನೀಡಿವೆ.ಕನ್ನಡ ಮಾತನಾಡಲು ಸ್ಪಷ್ಟವಾಗಿ ಬರುವುದಿಲ್ಲ ಎಂದು ಸಂದರ್ಶವೊಂದರಲ್ಲಿ ಹೇಳಿದ್ದ ರಶ್ಮಿಕಾ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಅವರನ್ನು ಕನ್ನಡ ಚಲನಚಿತ್ರರಂಗದಿಂದ ಬಹಿಷ್ಕರಿಸಬೇಕು.

ಇನ್ನು ಮುಂದೆ ಅವರು ನಟಿಸುವ ಕನ್ನಡ ಚಿತ್ರಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ಮಂಡಳಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್​​​​ ದೂರು ನೀಡಿದ್ದಾರೆ.ರಶ್ಮಿಕಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಗಳ ಸ್ಟಾರ್​​ ನಟರೊಂದಿಗೆ ನಟಿಸಿದ್ದಾರೆ. ತೆಲುಗಿನ ವಿಜಯ ದೇವರಕೊಂಡ ನಟನೆಯ ಡಿಯರ್​​ ಕಾಮ್ರೆಡ್​​ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here