ಕೇಂದ್ರದ ರಾಜ್ಯ ಸಚಿವ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಎಂದೇ ಕರೆಸಿಕೊಳ್ಳುವ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಬಿಜೆಪಿ ಪಕ್ಷದ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.ಮೊನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಕೇಂದ್ರ ಸಚಿವ ಅನಂತಕುಮಾರ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆಎನ್ನಲಾಗಿದೆ.ನೇರವಾಗಿ ಅನಂತ್ ಕುಮಾರ್ ಅವರ ಹೆಸರು ಹೇಳದೇ ಪರೋಕ್ಷವಾಗಿ ಅನಂತ್ ಕುಮಾರ್ ಹೆಗ್ಗಡೆಯವರಿಗೆ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ. ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಮ್ಮ

ಬಿಜೆಪಿ ಪಕ್ಷದಲ್ಲೇ ಹಲವು ಜನರು ಇಷ್ಟ ಬಂದಂತೆ ಮಾತನಾಡುತ್ತಿದ್ದಾರೆ ಮೊದಲು ಅವರ ನಾಲಿಗೆಗೆ ಕಡಿವಾಣ ಹಾಕಬೇಕಿದೆ.ಲಂಗು ಲಗಾಮು ಇಲ್ಲದೇ ಮಾತನಾಡುವುದನ್ನು ಮೊದಲು ಬಿಡಬೇಕು.ಕೆಲವು ಬಾರಿ ಇಂತಹ ಮಾತುಗಳು ಪಕ್ಷದ ಓಟ್ ಬ್ಯಾಂಕ್ ಗೆ ಮಾರಕವಾಗುತ್ತವೆ ಎಂದು ಅನಂತ್ ಕುಮಾರ್ ಅವರು ಅನಂತ್ ಕುಮಾರ್ ಹೆಗ್ಡೆ ಗೆ ಪರೋಕ್ಷವಾಗಿ ಹೇಳಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಈ ಹಿಂದೆ ಅನಂತ್ ಕುಮಾರ್ ಹೆಗ್ಡೆ ಅವರು ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರ ಕುರಿತು ಏಕವಚದಲ್ಲಿ ವಾಗ್ದಾಳಿ ನಡೆಸಿದರು‌.ಈ ಹೇಳಿಕೆಗಳಿಂದ ಬಿಜೆಪಿ ನಾಯಕರ ತೀವ್ರ ಮುಜುಗರ ಎದುರಿಸಬೇಕಾಗುತ್ತದೆ.ಲೋಕಸಭಾ ಚುನಾವಣೆ ಇರುವುದರಿಂದ ನಾವು ಯಾವಾಗಲೂ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂಬುದು ಅನಂತ್ ಕುಮಾರ್ ಅವರ ಹೇಳಿಕೆಯ ಅರ್ಥ ಇರಬಹದು..

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here