ಜಿಂದಾಲ್‌ಗೆ ಕಂಪನಿಗೆ 3,667 ಎಕರೆ ಭೂಮಿ ನೀಡುವ ಮೈತ್ರಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಎರಡು ದಿನಗಳ ಕಾಲ ಬಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ. ನೆನ್ನೆ ಇಡೀ ರಾತ್ರಿ ಯಡಿಯೂರಪ್ಪ, ಆರ್.ಅಶೋಕ್ ,ಈಶ್ವರಪ್ಪ ಸೇರಿ ಹಲವಾರು ಶಾಸಕರು ರಾತ್ರಿ ರಸ್ತೆಯಲ್ಲಿ ಮಲಗುವ ಮೂಲಕ ಧರಣಿ ಮುಂದುವರಿಸಿದ್ದಾರೆ.ವಿಧಾನ ಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯುತ್ತಿರುವ ಜಿಂದಾಲ್ ಕಂಪನಿಗೆ ಜಮೀನು ನೀಡಿರುವ ಸಮ್ಮಿಶ್ರ ಸರ್ಕಾರದ ಕ್ರಮ ಖಂಡಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು, ನಾಯಕರು ಉಪಸ್ಥಿತರಿದ್ದಾರೆ.

ಬೆಂಗಳೂರಿನ ಆನಂದ್‌ ರಾವ್‌ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಮಾರ್ಚನೆ ಮಾಡುವ ಮೂಲಕ ಧರಣಿಗೆ ಚಾಲನೆ ನೀಡಲಾಗಿದ್ದು ನೂರಾರು ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿದೆ.ಹಗರಣಗಳು ಕಣ್ಣೆದುರೇ ಇದ್ದರೂ ಸಿದ್ದರಾಮಯ್ಯ ಅವರು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ.

ಸಾಲ ಮನ್ನಾ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದ್ದು, ಬರನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಕಂಡಿದೆ ಎಂದು ಬಿಜೆಪಿ ಪಕ್ಷವು ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಆರ್‌.ಅಶೋಕ್‌, ಕೆ.ಎಸ್‌.ಈಶ್ವರಪ್ಪ, ಶ್ರೀರಾಮುಲು, ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ , ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಸೇರಿದಂತೆ ಹಲವಾರು ಶಾಸಕರು ಹಾಗೂ ಕಾರ್ಯಕರ್ತರು ಧರಣಿಯಲ್ಲಿ ಭಾಗಿಯಾಗಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here