City Big News Desk.
ಬೆಂಗಳೂರು: ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು ಟಿ ಖಾದಿರವರು ಅಮಾನತ್ತು ಮಾಡಿರುವುದರಿಂದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಹೌದು, ಬಿಜೆಪಿಯ 10 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಕಲಾಪಕ್ಕೆ ಹಾಜರಾಗದೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಸ್ಪೀಕರ್ ನಡೆಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
21 ದಿನಗಳ ಕಾಲ ನಡೆದ ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ. ಅಧಿವೇಶನ ಆರಂಭದ ದಿನಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕೆಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿ ಉಂಟು ಮಾಡಿತ್ತು. ಇದೀಗ ಕೊನೆಯ ದಿನವೂ ಕಲಾಪ ಬಹಿಷ್ಕಾರ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.