ಬೆಂಗಳೂರು, ಸೆ.22: ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ನಾಳೆ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಕಾವೇರಿ ಹೋರಾಟದ ಕಿಚ್ಚು ಜೋರಾಗುತ್ತಿದ್ದು, ವಿವಿಧ ಸಂಘಟನೆಗಳಿಂದ ಬೆಂಗಳೂರಲ್ಲಿ ಪ್ರತಿಭಟನೆ ನಡೆದಿದ್ದು, ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ತೀವ್ರ ಗಂಡಾಂತರ ಈ ಸರ್ಕಾರ ತಂದಿದೆ. ಕಾವೇರಿ ನಿರ್ವಹಣೆಯಲ್ಲಿ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ.ಸುಪ್ರೀಂ ಕೋರ್ಟ್ ಸಮರ್ಪಕವಾದ ಮಾಡದೆ ಇರುವ ಪರಿಣಾಮ ಕರ್ನಾಟಕಕ್ಕೆ ಗಾಯದಮೇಲೆ ಬರೆ ಎಳೆದಂತಾಗಿದೆ.
ಸರ್ಕಾರದ ಅರ್ಧಂಬರ್ಧ ಗ್ಯಾರಂಟಿ ಕೊಟ್ಟು ಮೋಸ ಮಾಡಿದೆ. ಮೊದಲು ನೀರಿನ ಗ್ಯಾರಂಟಿ ಕೊಡಿ. ರಾಜ್ಯದಲ್ಲಿ ಬರಗಾಲ ಇದೆ, ಮಳೆ ಅಭಾವ ಇದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಟ್ರಿಬ್ಯೂನಲ್ ನಲ್ಲಿ ಇರುವ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಹೇಳಿಲ್ಲ ಎಂದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿ ತೀವ್ರ ಪ್ರತಿಭಟನೆ ಮಾಡುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಲಿದೆ. ಬೆಂಗಳೂರು ಅಂತರಾಷ್ಟ್ರೀಯ ನಗರ. ಡಿಕೆಶಿ ಮಾತೆತ್ತಿದರೆ ಬ್ರಾಂಡ್ ಬೆಂಗಳೂರು ಅಂತಾರೆ. ಆದರೆ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆ ಇಲ್ಲ ಇವರಲ್ಲಿ ಎಂದು ಕಿಡಿಕಾರಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.