City Big News Desk.
ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತ ಕೋರಿದರು. ನಂತರ ನಾಯಕರು ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ತೆರಳಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿವೆ. ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆ ನಡೆಯಲಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸಭೆ ಅಂತಿಮ ಸಿದ್ಧತೆ ನಡೆಸಲಾಗಿದೆ. 24 ಪಕ್ಷಗಳ 49 ನಾಯಕರು ಈ ಸಭೆಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿಪಿಐಎಂನ ಸೀತಾರಾಮ್ ಯೆಚೂರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೊದಲಾದವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಪಂಜಾಬ್ ಸಿಎಂ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಶಿವಸೇನೆಯ ಉದ್ಧವ್ ಠಾಕ್ರೆ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲ, ಸಿಪಿಐ ನ ಡಿ ರಾಜಾ ಸೇರಿದಂತೆ ಹಲವು ನಾಯಕರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.