ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವೈರಸ್‍ನಿಂದಾಗಿ ಬಡವರಿಗೆ ಹೊರೆ ಆಗದೇ ಇರಲು ರಾಜ್ಯ ಸರ್ಕಾರದ ಕಡೆಯಿಂದ ಹಲವು ಘೋಷಣೆಗಳನ್ನು ಪ್ರಕಟಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಅವರು, ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ ಅಲ್ಲದೆ ಸುಮಾರು 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು ಎಂದು ಕೂಡಾ ಅವರು ಘೋಷಣೆ ಮಾಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣವನ್ನು ನೀಡಲಾಗುವುದು ಎಂದು ಭರವಸೆ ಒದಗಿಸಿದ್ದಾರೆ. ಸರ್ಕಾರವು ವೈರಸ್ ನಿಯಂತ್ರಣಕ್ಕೆ ತನ್ನ ಶಕ್ತಿ ಮೀರಿದ ಪ್ರಯತ್ನವನ್ನು ಮಾಡುತ್ತಿದೆ ಎಂದಿದ್ದು, ಇಂತಹ ಸಂದರ್ಭದಲ್ಲಿ ವಿಪಕ್ಷಗಳು ಸಹಕಾರ ಬೇಕಿತ್ತು‌. ಆದರೆ ಅನಿವಾರ್ಯ ಕಾರಣಗಳಿಂದ ಅವರು ಹೊರಗಿದ್ದಾರೆ.‌ ಇದು ನೋವಿನ ವಿಷಯ ಎಂದು ಕೂಡಾ ಹೇಳಿದ್ದಾರೆ. ಇದಲ್ಲದೆ ಮುಖ್ಯಮಂತ್ರಿ ಅವರ ಟ್ವೀಟರ್ ಖಾತೆಯಲ್ಲಿ ಜನರಿಗೆ ಸಂದೇಶವೊಂದನ್ನು ಕೂಡಾ ರವಾನೆ ಮಾಡಲಾಗಿದೆ.

ಸಮಸ್ತ ನಾಗರಿಕ ಬಂಧುಗಳ ಗಮನಕ್ಕೆ

ಬೆಂಗಳೂರಿನಲ್ಲಿ ಕೆಲವೆಡೆ ಎಂದಿನಂತೆ ಜನಸಂದಣಿ ಅನಗತ್ಯವಾಗಿ ಸೇರುತ್ತಿರುವುದು ಸರಿಯಲ್ಲ.
ಇದು ಸೋಂಕು ಹರಡುವುದನ್ನು ತಡೆಯುವ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ. ಅತ್ಯಂತ ಅಗತ್ಯ ವಸ್ತುಗಳನ್ನು ಕೊಳ್ಳಲು ಹಾಗೂ ಇತರ ಅತ್ಯಗತ್ಯ ಸಂದರ್ಭದಲ್ಲಿ ಮಾತ್ರ ಜನತೆ ಹೊರಗಡೆ ಬರಬೇಕು. ಉದ್ದೇಶವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆಮೇಲೆ ಇದಕ್ಕೆ ಸರ್ಕಾರವನ್ನು ದೂರಬೇಡಿ.

ಮಾಹಾಜನತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here