ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರು ಗುರುವಾರ ಮಧ್ಯಾಹ್ನ 12.20ಕ್ಕೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ದತೆ ನಡೆದಿದ್ದು ನಾಳೆ ಎಲ್ಲಾ ಶಾಸಕರಿಗೂ ಪ್ರಮಾಣವಚನ ಕಾರ್ಯಕ್ರಮಮಕ್ಕೆ ಇಂದು ಅಹ್ವಾನ ನೀಡಲಾಗಿದೆ.ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗ, ನಮ್ಮ‌ಪಕ್ಷ 105 ಸದಸ್ಯರ ಬಲ ಹೊಂದಿದ್ದು, ಅತಿ ಹೆಚ್ಚು ಸಂಖ್ಯಾಬಲ ಇರುವ ಏಕೈಕ ಪಕ್ಷವಾಗಿದೆ. ಹೀಗಾಗಿ ಸರ್ಕಾರ ರಚನೆಗೆ ನಮಗೇ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದೆ.ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಶಂಕರ್, ಶಾಸಕಾಂಗ ಪಕ್ಷದ ನಾಯಕರಾಗಿ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡುವಾಗ ಅವರು ಸೂಚಕರಾಗಿ ಸಹಿ‌ಮಾಡಿದ್ದಾರೆ.

ರಾಜ ಭವನಕ್ಕೆ ಬಿಜೆಪಿ ನಿಯೋಗ ಭೇಟಿ ಮಾಡಿದಾಗ ಶಂಕರ್ ಕೂಡ ಇದ್ದರು. ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರ ಆಪ್ತರೂ ಆಗಿರುವ ಶಂಕರ್, ಹಳೆಯ ಸಖ್ಯದ ಕಾರಣಕ್ಕೆ ಅವರ ಜತೆ ಗುರುತಿಸಿಕೊಂಡಿದ್ದಾರೆ.ಇನ್ನು ಗುಜರಾತಿನವರಾದ ರಾಜ್ಯಪಾಲ ವಜುಭಾಯಿ ವಾಲಾ ಆರೆಸ್ಸೆಸ್ ಹಿನ್ನೆಲೆಯವರು.

ಗುಜರಾತ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ, ಬಳಿಕ ಸ್ಪೀಕರ್ ಆಗಿ ಕೆಲಸ ಮಾಡಿದವರು‌. ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಅವರ ಜತೆ ಉತ್ತಮ ಒಡನಾಟ ಹೊಂದಿದವರು. ಈ ಬಾಂಧವ್ಯ ಬಳಸಿಕೊಂಡು ಹೇಗಿದ್ದರು ಬಿಜೆಪಿಗೆ ಅತಿ ಹೆಚ್ಚು ಸ್ಥಾನ ಪಡೆದಿರುವುದರಿಂದ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಸಹಾಯವಾಗಲಿದೆ ಎಂದೂ ಹೇಳಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here