ಬೆಂಗಳೂರು: ಹಗಲು ರಾತ್ರಿ ಎನ್ನದೇ ದುಡಿಯುತ್ತಿರುವ ರಾಜ್ಯದ ಸಾರಿಗೆ ನೌಕರರಿಗೆ ರಾಜ್ಯ ಸಾರಿಗೆ ಇಲಾಖೆಯಿಂದ ಬಂಪರ್ ಭಾಗ್ಯ ಘೋಷಿಸಿದೆ ರಾಜ್ಯದ ನೌಕರರನ್ನು ಗಮನದಲ್ಲಿಟ್ಟುಕೊಂಡು ನೌಕರರಿಗೆ ಅನುಕೂಲವಾಗುವಂತಹುಗಳನ್ನು ಸರ್ಕಾರವು ಈಡೇರಿಸಲು ಸಿದ್ದವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4370.28 ಕೋಟಿ ರೂ. ಬೇಕಾಗುತ್ತೆ, ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ಕೊಡಲಾಗಿತ್ತು. ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ. ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4370.28 ಕೋಟಿ ಬೇಕಾಗುತ್ತೆ ಎಂದು ತಿಳಿಸಿದರು.
ಇನ್ನು ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಕೋರಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಾಗುತ್ತೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಜೊತೆ ಮಾತನಾಡಲಾಗಿದೆ. ಇ-ಆಟೋಗಳಿಗೆ ರಹದಾರಿ ಕುರಿತು ಪತ್ರ ಬರೆಯಲಾಗಿದೆ. ಜೀವಾವಧಿ ಟ್ಯಾಕ್ಸ್ ಅನ್ನು ಲೈಫ್ ಟ್ಯಾಕ್ಸ್ ಬೇಡ, ಮೊದಲಿನಂತೆ ಮಾಡುವಂತೆ ಕೋರಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದಿದಿದೇನೆ ಎಂದು ಹೇಳಿದರು.
ವರದಿ ಮಂಜುನಾಥ.ಲಕ್ಕಿಮರ(ವಿಜಯನಗರ)
Disclaimer: This Story is auto-aggregated by a Syndicated Feed and has not been Created or Edited By City Big News Staff.