ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಸೋಲಿನ ಹೊಣೆ ಹೊತ್ತಿರುವ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಜನತಾ ನ್ಯಾಯಾಲಯವು ಉತ್ತಮವಾದ ಹಾಗೂ ಒಳ್ಳೆಯ ತೀರ್ಪು ನೀಡುತ್ತದೆ ಎಂದು ನಿರೀಕ್ಷೆ ಇತ್ತು. ಅಲ್ಲದೆ ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರೂ ಕೂಡಾ ಅವರ ಶಕ್ತಿ ಮೀರಿ ಕೆಲಸಗಳನ್ನು ಮಾಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲಬೇಕೆಂದು, ಮೋಸ ಮಾಡಿದವರನ್ನು ಸೋಲಿಸಬೇಕೆಂದು ಪ್ರತಿಯೊಬ್ಬರೂ ಕೂಡಾ ತಮ್ಮ ಶ್ರಮವನ್ನು ವಹಿಸಿದ್ದು, ಶಕ್ತಿ ಮೀರಿ ಕೆಲಸವನ್ನು ಮಾಡಿದ್ದಾರೆ.

ಆದರೆ ಚುನಾವಣಾ ಫಲಿತಾಂಶ ಮಾತ್ರ ನಾವು ನಿರೀಕ್ಷೆ ಮಾಡಿದಂತೆ ಬಂದಿಲ್ಲ. ಪಕ್ಷಕ್ಕೆ ಮೋಸ ಮಾಡಿದವರು ಚುನಾವಣೆಯಲ್ಲಿ ಗೆದ್ದಿರುವುದರಿಂದ ಸಹಜವಾಗಿಯೇ ನೋವಾಗಿದೆ. ಆದರೂ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಶುಭಾಶಯವನ್ನು ಕೋರುವುದಾಗಿ ಅವರು ತಿಳಿಸಿದ್ದಾರೆ. ದಿನೇಶ್ ಗುಂಡೂರಾವ್ ಅವರಿಗಿಂತ ಮೊದಲು ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಾವು ಜನರು ನೀಡಿರುವ ತೀರ್ಪನ್ನು ಒಪ್ಪಿದ್ದೇವೆ ಎಂದು ಹೇಳಿದ್ದಾರೆ.
ಜನರು ಕುದುರೆ ವ್ಯಾಪಾರಕ್ಕೆ ಒಪ್ಪಿಕೊಂಡವರಿಗೆ ಬುದ್ಧಿ ಕಲಿಸುತ್ತಾರೆ ಎಂದು ನಿರೀಕ್ಷೆ ಮಾಡಿದ್ದೆ ಆದರೆ ನನ್ನ ನಿರೀಕ್ಷೆಯನ್ನು ಜನರು ಸುಳ್ಳಾಗಿಸಿದೆ.

ಸಿದ್ಧರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯ ಒಂದು ಪ್ರತಿಯನ್ನು ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕೂಡಾ ರವಾನಿಸಿರುವುದಾಗಿ ಅವರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಇಂತಹ ಒಂದು ಫಲಿತಾಂಶವನ್ನು ನಿರೀಕ್ಷೆ ಕೂಡಾ ಮಾಡಿರಲಿಲ್ಲ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here