ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಇಲ್ಲಿಯವರೆಗೆ ನಾವು ಪಟ್ಟಿರುವ ಹಿಂಸೆಯೇ ಸಾಕಾಗಿದ್ದು, ಈಗ ನಡೆಯಲಿರುವ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಕೂಡಾ ಅಭ್ಯರ್ಥಿಗಳು ಇರುವುದಿಲ್ಲವೆಂದು ಮಾಜಿ ಮುಖ್ಯಮಂತ್ರಿ
ಎಚ್​.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
ಜೆ.ಪಿ.ನಗರದ ನಿವಾಸದಲ್ಲಿ ನಡೆದ ಸಭೆಯಯಲ್ಲಿ ಮಾತನಾಡಿದ ಅವರು ಈ ವಿಷಯವನ್ನು ಎಲ್ಲರಿಗೂ ತಿಳಿಸುವ ಮೂಲಕ ಹರಡಿದ್ದ ಸುದ್ದಿಗೆ ಸ್ಪಷ್ಟವಾದ ಉತ್ತರವನ್ನು ನೀಡಿದ್ದಾರೆ.

ಹೆಚ್.ಡಿ.ಕುಮಾರ ಸ್ವಾಮಿ ಅವರು ಮಾತನಾಡುತ್ತಾ ಕಾರ್ಯಕರ್ತರು ನಮ್ಮ ಕುಟುಂಬದವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡವನ್ನು ಹಾಕುತ್ತಿದ್ದಾರೆ. ಆದರೆ ಜೆಡಿಎಸ್ ಕಾರ್ಯಕರ್ತರನ್ನೇ ನಿಲ್ಲಿಸಿ ಗೆಲ್ಲಿಸುವ ಬಗ್ಗೆ ನಮಗೂ ಒತ್ತಡ ಇದೆ ಎಂದು ಅವರು ಹೇಳಿದ್ದಾರೆ. ಕೆ.ಆರ್.ಪೇಟೆ, ಹುಣಸೂರು, ಚಿಕ್ಕಬಳ್ಳಾಪುರದಲ್ಲೂ ಕೂಡಾ ನಮ್ಮ ಕುಟುಂಬದ ಸದಸ್ಯರು ಸ್ಪರ್ಧೆ ಮಾಡಬೇಕೆಂಬ ಒತ್ತಾಯ ಇದೆ.
ಆದರೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಕುಮಾರ ಸ್ವಾಮಿ ಅವರು ಮಾತು ಮುಂದುವರೆಸಿ ನಮ್ಮ ಕುಟುಂಬದ ವೈಮನಿಸ್ಸಿನಿಂದ ಪಕ್ಷವನ್ನು ಬಲಿ ಕೊಡಲು ನಾವು ಸಿದ್ಧರಿಲ್ಲ ಎಂದಿದ್ದು, 15 ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿರುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಉಪಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣೆ ತಯಾರಿ ಸಭೆ ನಡೆಸುತ್ತಿದ್ದೇವೆ. ಕಳೆದ ಒಂದು ತಿಂಗಳಿನಿಂದ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು ಮುಖಂಡರ ಅಭಿಪ್ರಾಯ ಪಡೆದಿದ್ದು, ಇನ್ನು ಎರಡು ದಿನಗಳಲ್ಲಿ 15 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here