ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಇದೇ ಮೊದಲ ಬಾರಿಗೆ ಕಂಬಳದ ಕರೆ ಪೂಜೆ ನೆರವೇರಿದೆ. ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ ನಾರಾಯಣ್, ಶಾಸಕ ಹ್ಯಾರೀಸ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ತುಳುಕೂಟಕ್ಕೆ 50 ವರ್ಷದ ಸಂಭ್ರಮ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದ್ದು ನವೆಂಬರ್ ತಿಂಗಳ 24, 25, 26ರಂದು ಕಂಬಳ ನನಡೆಯಲಿದೆ. ಇಂದಿನಿಂದ ಒಂದು ತಿಂಗಳ ಕಾಲ ಕಂಬಳಕ್ಕಾಗಿ ಟ್ರ್ಯಾಕ್ ಸಿದ್ದಪಡಿಸಲಾಗುತ್ತೆ.
ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿಕ ಆಚರಣೆ. ಪ್ರತಿಷ್ಠೆಗಾಗಿ ನಡೆಯುವ ಈ ಕಂಬಳ ಕರಾವಳಿ ಭಾಗದಲ್ಲಿ ಅತ್ಯಂತ ವಿಶೇಷ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕಂಬಳ ಕಾಮನ್. ವರ್ಷದಲ್ಲಿ ಕಂಬಳ ಋತುವಿನಲ್ಲಿ ಕರಾವಳಿಯಲ್ಲಿ ಸಾಲು ಸಾಲು ಕಂಬಳಗಳು ನಡೆಯುತ್ತವೆ.
ಆದರೆ ಈ ವರ್ಷ ಇದೆಲ್ಲದಕ್ಕೂ ಮೊದಲು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ನವೆಂಬರ್ 24 ರಿಂದ ಮೂರು ದಿನಗಳ ಕಾಲ ಅದ್ದೂರಿ ಕಂಬಳ ನಡೆಯಲಿದೆ. 125 ರಿಂದ 150 ಜೊತೆ ಕೋಣಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಿ ಜಂಬಳ ಮಾಡಲಾಗುತ್ತೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.