ಬೆಂಗಳೂರು: ರಾಜ್ಯದ ಕಾವೇರಿ ಪಾತ್ರದ ಆಣೆಕಟ್ಟುಗಳ ಒಳಹರಿವು 15 ಸಾವಿರ ಕ್ಯೂಸೆಕ್ ಗೆ ಹೆಚ್ಚಾಗಿದ್ದು, ಇದು ರಾಜ್ಯದ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜ್ಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ವಕೀಲರ ಜೊತೆ ಚರ್ಚೆ ಮಾಡಿ ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿನ್ನೆ ಮೇಲ್ಮನವಿ ಸಲ್ಲಿಸಿದ್ದೇವೆ. ಒಳ ಹರಿವು ಹೆಚ್ಚಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಮೇಲೆ ಬೀಳಲಿ ಎಂದು ಎಲ್ಲಾ ಜನರು ಪ್ರಾರ್ಥನೆ ಮಾಡಬೇಕಿದೆ.