ಇಂದು ಆಷಾಢ ಮಾಸದ ಮೊದಲ ಶುಕ್ರವಾರ. ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಂದು ಆಷಾಢ ವಿಶೇಷ ಪೂಜೆ. ಮೂಲತಃ ಮೈಸೂರಿನವರೆ ಆದ ಚಾಲೆಂಜಿಂಗ್ ಸ್ಟಾರ್ ಪ್ರತಿ ವರ್ಷ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಅದೇ ರೀತಿ ಈ ವರ್ಷವೂ ಕೂಡ ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ.ಇಂದು ಶಕ್ತಿದೇವತೆ ಚಾಮುಂಡಿಗೆ ವಿಶೇಷ ಪೂಜೆ, ಪುನಸ್ಕಾರ ನೆರವೇರಲಿದೆ. ಮುಂಜಾನೆಯೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಸನ್ನಿಧಿಗೆ ಬರ್ತಿದ್ದಾರೆ.

ಬೆಟ್ಟದ ತುದಿವರೆಗೆ ಇದ್ದ ವಾಹನ ಸಂಚಾರ ಸ್ಥಗಿತಗೊಳಿಸಿ, ಸಂಚಾರ ದಟ್ಟಣೆ ತಡೆಯಲಾಗಿದೆ. ದೇವಿಯನ್ನ ಸಿಂಗರಿಸಿ ವಿವಿಧ ಪೂಜೆಗಳನ್ನ ನೆರವೇರಿಸಲಾಗ್ತಿದ್ದು, ಚಾಮುಂಡಿ ಬೆಟ್ಟದಲ್ಲಿ ಸಡಗರ ಮನೆ ಮಾಡಿದೆ.ಪ್ರತಿ ಆಷಾಢ ಶುಕ್ರವಾರದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನಡೆಯುತ್ತದೆ. ಆಷಾಢ ಮಾಸದಲ್ಲಿ ಶಕ್ತಿದೇವತೆಗಳ ಆರಾಧನೆಯಿಂದ ಕುಟುಂಬ ಸದಸ್ಯರ ಆರೋಗ್ಯ, ಐಶ್ವರ್ಯ ಸಂಪತ್ತು ಅಭಿವೃದ್ದಿಯಾಗುತ್ತೆ ಅನ್ನೋದು ಭಕ್ತರ ನಂಬಿಕೆ ಆದ್ದರಿಂದ ಇಂದು ಸಾವಿರಾರು ಭಕ್ತರು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾಗುತ್ತಾರೆ.

ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ದರ್ಶನ್,  ನಾನು ಪ್ರತಿವರ್ಷವೂ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿ ದರ್ಶನ ಪಡೀತಿನಿ. ಆ ತಾಯಿಯಿಂದನೇ ನಾವೆಲ್ಲ ಇರೋದು. ದೇವಿ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ನಾನು ಪ್ರಾರ್ಥಿಸುತ್ತೇನೆ ಎಂದರು. ಇನ್ನು  ಚಾಮುಂಡೇಶ್ವರಿಯ ಸನ್ನಿಧಿಗೆ ಆಗಮಿಸಿದ ಭಕ್ತರು ತಮ್ಮ ನೆಚ್ಚಿನ ನಟ ದಚ್ಚುವನ್ನು ನೋಡಿ ಸಖತ್ ಖುಷಿಪಟ್ಟು ದರ್ಶನ್ ಜೊತೆ ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here